ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. "ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.
ನವದೆಹಲಿ, ಜನವರಿ 1: ಕಾಂಗ್ರೆಸ್ ನಾಯಕ ನಾನಾ ಪಟೋಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ್ದಾರೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ (Ram Temple) ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. “ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
“ರಾಹುಲ್ ಗಾಂಧಿ ಅಯೋಧ್ಯೆಗೆ ಹೋದಾಗ ಅವರು ರಾಮಲಲ್ಲಾನ ದರ್ಶನ ಪಡೆಯುತ್ತಾರೆ. ರಾಜೀವ್ ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಅವರು ರಾಮಲಲ್ಲಾ ದೇವಾಲಯದ ದ್ವಾರಗಳನ್ನು ತೆರೆದು ಭೂಮಿ ಪೂಜೆ ನೆರವೇರಿಸಿದರು. ನಮಗೆ ನಮ್ಮ ದೇವರ ಮೇಲೆ ನಂಬಿಕೆ ಮತ್ತು ಭಕ್ತಿ ಇದೆ. ನಾವು ಕೂಡ ದೇವರಿಗೆ ತಲೆ ಬಾಗುತ್ತೇವೆ” ಎಂದು ನಾನಾ ಪಟೋಲೆ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

