ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ ಖರ್ಗೆ

Edited By:

Updated on: Jul 06, 2026 | 12:43 PM

ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಶೇ.40ರಷ್ಟು ಕಮಿಷನ್ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಆರೋಪಿಸಿದ್ದಾರೆ. ನಿರ್ಮಾಣ ಉಸ್ತುವಾರಿ ಗೋಪಾಲ್ ಜಿ ತಮ್ಮ ಅಳಿಯನಿಗೆ ಗುತ್ತಿಗೆ ನೀಡಿದ್ದಾರೆ. ಬಿಜೆಪಿ ಈ ಕಮಿಷನ್ ಹಗರಣಕ್ಕೆ ಕಾರಣವಾಗಿದೆ ಎಂದು ಹೇಳಿದ ಖರ್ಗೆ, ರಾಮಮಂದಿರ ಟ್ರಸ್ಟ್ ಸದಸ್ಯರು ಆರ್‌ಎಸ್‌ಎಸ್ ತರಬೇತಿ ಪಡೆದಿದವರು ಎಂದು ತಿಳಿಸಿದ್ದಾರೆ.

ಕಲಬುರಗಿ, ಜುಲೈ 06: ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿದ್ದ ಗೋಪಾಲ್ ಜಿ ಅವರು ತಮ್ಮ ಅಳಿಯನಿಗೆ ಶೇ.40ರಷ್ಟು ಕಮಿಷನ್ ಪಡೆದು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ಅಯೋಧ್ಯೆಯಲ್ಲಿ ಕಮಿಷನ್ ಪಡೆದಿದೆ ಎಂದು ದೂರಿದ ಅವರು, ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ನಿರ್ವಹಣೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. ಟ್ರಸ್ಟ್ ಸಭೆ ಯಾವ ವಿಚಾರಕ್ಕೆ ನಡೆಯುತ್ತಿದೆ? ಚಂಪತ್ ರಾಯ್ ಮತ್ತು ಗೋಪಾಲ್ ಮಿಶ್ರಾ ಅವರ ರಾಜೀನಾಮೆ ಬಗ್ಗೆ ಚರ್ಚಿಸಲು ಅಲ್ಲವೇ. ಇವರು ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More