ಮಂಡ್ಯದಲ್ಲಿ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಸಚಿವರಿಂದ ಭಾರೀ ಸ್ವಾಗತ

ಮಂಡ್ಯದಲ್ಲಿ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಸಚಿವರಿಂದ ಭಾರೀ ಸ್ವಾಗತ

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 17, 2024 | 4:15 PM

ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ ಹೆಲಿಕಾಪ್ಟರ್ ನಲ್ಲಿ ಆಗಮಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸ್ಟಾರ್ ಚಂದ್ರು ಮೊದಲಾದವರು ಸ್ವಾಗತಿಸಿದರು. ಪಕ್ಷದ ಹಿರಿಯ ನಾಯಕಿ ಮತ್ತು ಮಾಜಿ ಸಚಿವೆ ರಾಣಿ ಸತೀಶ್ ಸಹ ವೇದಿಕೆ ಮೇಲಿದ್ದರು

ಮಂಡ್ಯ: ನಾವು ಪದೇಪದೆ ಹೇಳುತ್ತಿರುವ ಹಾಗೆ ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಒಂದು ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿದೆ. ಉಳಿದ 27 ಕ್ಷೇತ್ರಗಳ ತೂಕ ಒಂದಾದರೆ ಮಂಡ್ಯದ ತೂಕ ಮತ್ತೊಂದು ಎನ್ನುವ ವಾತಾವರಣ ಸೃಷ್ಟಿಯಾಗಿದೆ ಅಂದರೆ ಅತಿಶಯೋಕ್ತಿ ಅನಿಸದು. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (Venkatramanegowda) (ಸ್ಟಾರ್ ಚಂದ್ರು) ಅವರ ಪರವಾಗಿ ಪ್ರಚಾರ ಮಾಡಲು ಇಂದು ರಾಹುಲ್ ಗಾಂಧಿ (Rahul Gandhi) ಮಂಡ್ಯ ನಗರಕ್ಕೆ ಆಗಮಿಸಿದರು. ನಗರದ ಪಿಎಎಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ ಹೆಲಿಕಾಪ್ಟರ್ ನಲ್ಲಿ ಆಗಮಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸ್ಟಾರ್ ಚಂದ್ರು ಮೊದಲಾದವರು ಸ್ವಾಗತಿಸಿದರು. ಪಕ್ಷದ ಹಿರಿಯ ನಾಯಕಿ ಮತ್ತು ಮಾಜಿ ಸಚಿವೆ ರಾಣಿ ಸತೀಶ್ ಸಹ ವೇದಿಕೆ ಮೇಲಿದ್ದರು. ದೃಶ್ಯಗಳಲ್ಲಿ ನೀವು ನೋಡುವಂತೆ ಮೊದಲಿಗೆ ಶಿವಕುಮಾರ್ ವೇದಿಕೆ ಮೇಲೆ ಬರುತ್ತಾರೆ, ನಂತರ ಸಿದ್ದರಾಮಯ್ಯ ಮತ್ತು ಕೊನೆಯಲ್ಲಿ ರಾಹುಲ್ ಗಾಂಧಿ ಆಗಮಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಾಂಗ್ರೆಸ್, ರಾಹುಲ್ ಗಾಂಧಿ​ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕಷ್ಟೆ: ಸಿಟಿ ರವಿ ವ್ಯಂಗ್ಯ  

Published on: Apr 17, 2024 04:11 PM