Karnataka Assembly Polls: ಶಿವಮೊಗ್ಗದಲ್ಲಿ ವೇದಿಕೆಯ ಮೇಲೆ ಶಿವರಾಜ್ ಕುಮಾರ್​ರನ್ನು ಆತ್ಮೀಯವಾಗಿ ತಬ್ಬಿಕೊಂಡ ರಾಹುಲ್ ಗಾಂಧಿ

ಅರುಣ್​ ಕುಮಾರ್​ ಬೆಳ್ಳಿ

Updated on: May 02, 2023 | 2:49 PM

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಶಿವಮೊಗ್ಗಗೆ ಆಗಮಿಸಿದಾಗ ವೇದಿಕೆಯ ಮೇಲೆ ಗೀತಾ ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್ ಕೂಡ ಇದ್ದರು

ಶಿವಮೊಗ್ಗ: ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ (Shivarajkumar) ಕಾಂಗ್ರೆಸ್ ಪರ ಪ್ರಚಾರಕ್ಕೆ ಅಗಮಿಸಿರುವುದು ಪಕ್ಷದ ನಾಯಕ ರಾಹುಲ್ ಗಾಂಧಿಗೆ (Rahul Gandhi) ಅತೀವ ಸಂತಸ ನೀಡಿದೆ. ಶಿವಮೊಗ್ಗದಲ್ಲಿ (Shivamogga) ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಆಗಮಿಸಿದಾಗ ವೇದಿಕೆಯ ಮೇಲೆ ಮೊನೆಯಷ್ಟೇ ಕಾಂಗ್ರೆಸ್ ಪಕ್ಷ ಸೇರಿದ ಗೀತಾ ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್ ಕೂಡ ಇದ್ದರು. ಕಾಂಗ್ರೆಸ್ ನಾಯಕ ಮತ್ತು ಗೀತಾ ಅವರ ಸಹೋದರ ಮಧು ಬಂಗಾರಪ್ಪ ಶಿವರಾಜ್ ಕುಮಾರರನ್ನು ರಾಹುಲ್ ಗೆ ಪರಿಚಯಿಸಿದಾಗ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ನಂತರ ರಾಹುಲ್ ನಟನೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಭಾಷಣ ಮಾಡಲು ಹೋದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.