AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಕ್ಷದ ನಾಯಕನಿಂದಲೇ ಸಚಿವ ಮಧುಬಂಗಾರಪ್ಪ ಪಿಎ ಹಣ ವಸೂಲಿ ದಂಧೆ ಬಯಲು

ಸ್ವಕ್ಷದ ನಾಯಕನಿಂದಲೇ ಸಚಿವ ಮಧುಬಂಗಾರಪ್ಪ ಪಿಎ ಹಣ ವಸೂಲಿ ದಂಧೆ ಬಯಲು

ಬಸವರಾಜ್​ ಯರಗಣವಿ
| Edited By: |

Updated on: Sep 23, 2026 | 10:43 PM

Share

ಜಿಲ್ಲಾ ಕಾಂಗ್ರೆಸ್‌ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಸ್ವಪಕ್ಷದ ಮುಖಂಡರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾ ನಾಯಕರ ವಿರುದ್ಧ ನೇರಾನೇರ ಆರೋಪ ಮಾಡಿದ್ದಾರೆ. ಅಲ್ಲದೇ ಮಧು ಬಂಗಾರಪ್ಪನವರ ಆಪ್ತ ಸಹಾಯ (ಪಿಎ) ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಬಗ್ಗೆಯೂ ಗಂಭೀರ ಆರೋಪಗಳನ್ನ ಮಾಡಿದ್ದಾರೆ.

ಶಿವಮೊಗ್ಗ, (ಸೆಪ್ಟೆಂಬರ್ 23): ಜಿಲ್ಲಾ ಕಾಂಗ್ರೆಸ್‌ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಸ್ವಪಕ್ಷದ ಮುಖಂಡರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾ ನಾಯಕರ ವಿರುದ್ಧ ನೇರಾನೇರ ಆರೋಪ ಮಾಡಿದ್ದಾರೆ. ಅಲ್ಲದೇ ಮಧು ಬಂಗಾರಪ್ಪನವರ ಆಪ್ತ ಸಹಾಯ (ಪಿಎ) ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಬಗ್ಗೆಯೂ ಗಂಭೀರ ಆರೋಪಗಳನ್ನ ಮಾಡಿದ್ದಾರೆ.

ಈ ಸಂಬಂಧ  ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸೂಡಾ ಅಧ್ಯಕ್ಷ H.S.ಸುಂದರೇಶ್, ಮೂರ್ಖರು, ದಡ್ಡರ ಸಂತೆಯಿಂದ ಕಾಂಗ್ರೆಸ್ ಪಕ್ಷ ತಳಮಟ್ಟಕ್ಕೆ ಹೋಗುತ್ತಿದೆ. ಇಲ್ಲಿ ಪಕ್ಷಕ್ಕೋಸ್ಕರ ದುಡಿದವರಿಗೆ ಅವಕಾಶವಿಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಹಗುರವಾಗಿ ಮಾತನಾಡಿದವರಿಗೆ ಮಂತ್ರಿ ಮಾಡಿದ್ದಾರೆ. JDSನಿಂದ ಬಂದ ಮಧು ಬಂಗಾರಪ್ಪ ಪಕ್ಷ ಆಳುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರಿಗೆ ಗಂಧ ಗಾಳಿ ಗೊತ್ತಿಲ್ಲ. ಸಚಿವರ ಆಪ್ತ ಸಹಾಯಕರು ಸರ್ಕಾರಿ ಕಚೇರಿಗಳಿಗೆ ತೆರಳಿ ಅಧಿಕಾರಿಗಳನ್ನು ಬೆದರಿಸಿ ಹಣಕ್ಕೆ ಬೇಡಿಕೆಯನ್ನಿಡುತ್ತಿದ್ದಾರೆ. 25 ಲಕ್ಷ, 5 ಲಕ್ಷಕ್ಕೆ ಬೇಡಿಕೆ ಇಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ನೋಡಿ: ಶಿವಮೊಗ್ಗ ಕಾಂಗ್ರೆಸ್​​ನಲ್ಲಿ ಭಿನ್ನಮತ ಸ್ಫೋಟ: ಸಚಿವ ಮಧು ಬಂಗಾರಪ್ಪ ವಿರುದ್ಧ ಗಂಭೀರ ಆರೋಪ

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More