ಸ್ವಕ್ಷದ ನಾಯಕನಿಂದಲೇ ಸಚಿವ ಮಧುಬಂಗಾರಪ್ಪ ಪಿಎ ಹಣ ವಸೂಲಿ ದಂಧೆ ಬಯಲು
ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಸ್ವಪಕ್ಷದ ಮುಖಂಡರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾ ನಾಯಕರ ವಿರುದ್ಧ ನೇರಾನೇರ ಆರೋಪ ಮಾಡಿದ್ದಾರೆ. ಅಲ್ಲದೇ ಮಧು ಬಂಗಾರಪ್ಪನವರ ಆಪ್ತ ಸಹಾಯ (ಪಿಎ) ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಬಗ್ಗೆಯೂ ಗಂಭೀರ ಆರೋಪಗಳನ್ನ ಮಾಡಿದ್ದಾರೆ.
ಶಿವಮೊಗ್ಗ, (ಸೆಪ್ಟೆಂಬರ್ 23): ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಸ್ವಪಕ್ಷದ ಮುಖಂಡರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾ ನಾಯಕರ ವಿರುದ್ಧ ನೇರಾನೇರ ಆರೋಪ ಮಾಡಿದ್ದಾರೆ. ಅಲ್ಲದೇ ಮಧು ಬಂಗಾರಪ್ಪನವರ ಆಪ್ತ ಸಹಾಯ (ಪಿಎ) ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಬಗ್ಗೆಯೂ ಗಂಭೀರ ಆರೋಪಗಳನ್ನ ಮಾಡಿದ್ದಾರೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸೂಡಾ ಅಧ್ಯಕ್ಷ H.S.ಸುಂದರೇಶ್, ಮೂರ್ಖರು, ದಡ್ಡರ ಸಂತೆಯಿಂದ ಕಾಂಗ್ರೆಸ್ ಪಕ್ಷ ತಳಮಟ್ಟಕ್ಕೆ ಹೋಗುತ್ತಿದೆ. ಇಲ್ಲಿ ಪಕ್ಷಕ್ಕೋಸ್ಕರ ದುಡಿದವರಿಗೆ ಅವಕಾಶವಿಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಹಗುರವಾಗಿ ಮಾತನಾಡಿದವರಿಗೆ ಮಂತ್ರಿ ಮಾಡಿದ್ದಾರೆ. JDSನಿಂದ ಬಂದ ಮಧು ಬಂಗಾರಪ್ಪ ಪಕ್ಷ ಆಳುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರಿಗೆ ಗಂಧ ಗಾಳಿ ಗೊತ್ತಿಲ್ಲ. ಸಚಿವರ ಆಪ್ತ ಸಹಾಯಕರು ಸರ್ಕಾರಿ ಕಚೇರಿಗಳಿಗೆ ತೆರಳಿ ಅಧಿಕಾರಿಗಳನ್ನು ಬೆದರಿಸಿ ಹಣಕ್ಕೆ ಬೇಡಿಕೆಯನ್ನಿಡುತ್ತಿದ್ದಾರೆ. 25 ಲಕ್ಷ, 5 ಲಕ್ಷಕ್ಕೆ ಬೇಡಿಕೆ ಇಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
