AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ

ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ

ಗಣಪತಿ ಶರ್ಮಾ
|

Updated on: Jul 31, 2026 | 12:15 PM

Share

ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್ ದೊರೆತಿದೆ. ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದಲ್ಲದೆ, ಜಾಮೀನು ಸಹ ನೀಡಿದೆ. ಹೀಗಾಗಿ ಕುಲಕರ್ಣಿ ಇಂದೇ ಜೈಲಿನಿಂದ ಬಿಡುಗಡೆಯಾಗುತ್ತಾರಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ಬಗ್ಗೆ ಅವರ ಪರ ವಕೀಲರು ಕೊಟ್ಟ ಮಾಹಿತಿ ಇಲ್ಲಿದೆ.

ಬೆಂಗಳೂರು, ಜುಲೈ 31: ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದ್ದು, ಈ ಕುರಿತು ಅವರ ವಕೀಲ ಸುನೀಲ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ನಾವು ಎರಡು ಅರ್ಜಿ ಸಲ್ಲಿಸಿದ್ದೆವು. ನ್ಯಾಯಾಲಯ ನಮ್ಮ ಅರ್ಜಿಯನ್ನು ಪುರಸ್ಕರಿಸಿದೆ. ವಿನಯ್ ಕುಲಕರ್ಣಿ ಪರ ಸಿವಿ ನಾಗೇಶ್ ವಾದ ಮಾಡಿದ್ದರು. ವಿನಯ್ ಕುಲಕರ್ಣಿ ಪಾತ್ರ ಇಲ್ಲ ವೆಂದು ವಾದ ಮಾಡಿದ್ದೆವು’ ಎಂದು ತಿಳಿಸಿದರು.

ವಿನಯ್ ಕುಲಕರ್ಣಿ ಇಂದೇ ಬಿಡುಗಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಜಾಮೀನು ಸಂಬಂಧ ದೃಢೀಕೃತ ಪತ್ರ ಇನ್ನೂ ಕೈಸೇರಿಲ್ಲ. ಆದೇಶದ ದೃಢೀಕೃತ ಪತ್ರ ಸಿಕ್ಕ ನಂತರ ಕೆಳಹಂತದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸ್ತೀವೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More