AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಸರ್ಕಾರದ ವಿರುದ್ಧ ವಿಎಸ್ ಉಗ್ರಪ್ಪ ಉಗ್ರ ಸ್ವರೂಪ, ಖಡಕ್ ಎಚ್ಚರಿಕೆ

ತಮ್ಮದೇ ಸರ್ಕಾರದ ವಿರುದ್ಧ ವಿಎಸ್ ಉಗ್ರಪ್ಪ ಉಗ್ರ ಸ್ವರೂಪ, ಖಡಕ್ ಎಚ್ಚರಿಕೆ

ಹರೀಶ್ ಜಿ.ಆರ್​.
| Edited By: |

Updated on: Oct 26, 2026 | 2:46 PM

Share

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರದ ವಿರುದ್ಧವೇ ವಿ.ಎಸ್​.ಉಗ್ರಪ್ಪ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿಂದು ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಉಗ್ರಪ್ಪ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬೇರೆ ರಾಜ್ಯಗಳಿಗೆ ಹೋಗಿದೆ. ಇದೇ ರೀತಿ ದುರ್ಬಳಕೆ ಮಾಡಿಕೊಂಡರೆ ಹೋರಾಟ ಮಾಡಬೇಕು. ಹಣ ದುರ್ಬಳಕೆ ಮಾಡಿಕೊಂಡರೆ ಸರ್ಕಾರದ ವಿರುದ್ಧ ಹೋರಾಟ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 26): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರದ ವಿರುದ್ಧವೇ ವಿ.ಎಸ್​.ಉಗ್ರಪ್ಪ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿಂದು ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಉಗ್ರಪ್ಪ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬೇರೆ ರಾಜ್ಯಗಳಿಗೆ ಹೋಗಿದೆ. ಇದೇ ರೀತಿ ದುರ್ಬಳಕೆ ಮಾಡಿಕೊಂಡರೆ ಹೋರಾಟ ಮಾಡಬೇಕು. ಹಣ ದುರ್ಬಳಕೆ ಮಾಡಿಕೊಂಡರೆ ಸರ್ಕಾರದ ವಿರುದ್ಧ ಹೋರಾಟ ಎಂದು ಎಚ್ಚರಿಕೆ ನೀಡಿದ್ದಾರೆ.

3 ವರ್ಷಗಳಲ್ಲಿ ನಮ್ಮ ಸಮುದಾಯದವರಿಗೆ ಎಷ್ಟು ಜಮೀನು ಸಿಕ್ಕಿದೆ. ಬೀದರ್​​-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ವಾಲ್ಮೀಕಿ ಹೆಸರಿಡಬೇಕು. ಸಭ್ಯರು, ವಿಚಾರವಂತರಿಗೆ ವಾಲ್ಮೀಕಿ ಪ್ರಶಸ್ತಿಗಳನ್ನು ನೀಡಬೇಕು. ಪ್ರಶಸ್ತಿ ಪಡೆದವರು ಮೀಸಲಾತಿ ರದ್ದಾದ ಬಗ್ಗೆ ಯಾಕೆ ಮಾತನಾಡ್ತಿಲ್ಲ ಎಸ್​​ಸಿ-ಎಸ್​​ಟಿ ಸಂಸದರು, ಶಾಸಕರು ಪ್ರಧಾನಿ ಭೇಟಿ ಮಾಡಬೇಕು. ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ಹೋಗಬೇಕು ಎಂದರು.

ಕರ್ನಾಟಕದ ಮತ್ತಷ್ಟು ಸದ್ದಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More