Karnataka Assembly Polls; ಮೊದಲೇ ಹೆದರಿದ್ದ ಕಾಂಗ್ರೆಸ್ ಗೆ ಪ್ರಧಾನಿ ಮೋದಿಯವರ ಪ್ರಚಾರದಿಂದ ನಡುಕ ಹುಟ್ಟಿದೆ: ಪ್ರಲ್ಹಾದ್ ಜೋಶಿ

Karnataka Assembly Polls; ಮೊದಲೇ ಹೆದರಿದ್ದ ಕಾಂಗ್ರೆಸ್ ಗೆ ಪ್ರಧಾನಿ ಮೋದಿಯವರ ಪ್ರಚಾರದಿಂದ ನಡುಕ ಹುಟ್ಟಿದೆ: ಪ್ರಲ್ಹಾದ್ ಜೋಶಿ

ಅರುಣ್​ ಕುಮಾರ್​ ಬೆಳ್ಳಿ
|

Updated on: May 05, 2023 | 5:08 PM

ಬಿಜೆಪಿ 125-130 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಗದಗ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇಂದು ಗದಗ ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್ ಶಾ (Amit Shah) ಅವರ ಪ್ರಚಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮೇಲೆ ಎಷ್ಟು ಪ್ರಭಾವ ಬೀರಲಿದೆ ಎಂದು ಕೇಳಿದ ಪ್ರಶ್ನೆಗೆ ಜೋಶಿ, ಕಾಂಗ್ರೆಸ್ ನಾಯಕರು ಮೊದಲೇ ಭಯಗೊಂಡಿದ್ದರು, ನಮ್ಮ ನಾಯಕ ಪ್ರಧಾನಿ ಮೋದಿ ಅವರು ಪ್ರಚಾರ ಶುರು ಮಾಡಿದಾಗಿನಿಂದ ಅವರಿಗೆ ನಡುಕ ಶುರುವಾಗಿದೆ, ಈ ಚುನಾವಣೆಯೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಇತಿಹಾಸದ ಪುಟ ಸೇರಲಿದೆ ಎಂದು ಜೋಶಿ ಹೇಳಿದರು. ಬಿಜೆಪಿ 125-130 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಜೋಶಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ