ಕಾಂಗ್ರೆಸ್ಸಿಗರಿಗೆ ನಿರಾಸೆ, ಬಿಜೆಪಿ ಬಿಡೋದಿಲ್ಲ ಅಂತ ಖಚಿತಪಡಿಸಿದ ಮಾಜಿ ಸಚಿವ ಬಿ ಶ್ರೀರಾಮುಲು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶ್ರೀರಾಮುಲುಗೆ ದೆಹಲಿ ಬರುವಂತೆ ಹೇಳಿದ್ದಾರೆ. ಫೆಬ್ರುವರಿ 5 ರ ನಂತರ ದೆಹಲಿ ತೆರಳಿ ವರಿಷ್ಠರನ್ನು ಭೇಟಿಯಾಗುವುದಾಗಿ ಮಾಜಿ ಸಚಿವ ಹೇಳುತ್ತಾರೆ. ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಪಕ್ಷದ ಹಿರಿಯರೊಂದಿಗೆ ಚರ್ಚಿಸಬೇಕಿದೆ, ಸಂಘಟನೆಯಲ್ಲಿ ಏಳುತ್ತಿರುವ ಅಪಸ್ವರಗಳ ಬಗ್ಗೆ ಅವರೊಂದಿಗೆ ಮಾತಾಡಬೇಕಿದೆ ಎಂದು ಶ್ರೀರಾಮುಲು ಹೇಳಿದರು.
ವಿಜಯನಗರ: ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಅಸಮಾಧಾನ ಹೊರಹಾಕುವಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ನಾಯಕ ಬಿ ಶ್ರೀರಾಮುಲು ಅವರು ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರುತ್ತಾರೆಂದುಕೊಂಡಿದ್ದವರಿಗೆ ನಿರಾಶೆ ಎದುರಾಗಿದೆ. ಜಿಲ್ಲೆಯ ಖಾಸಾಹೊಸಳ್ಳಿಯಲ್ಲಿ ಮಾತಾಡಿದ ಶ್ರೀರಾಮುಲು, ಪಕ್ಷ ಬಿಡುತ್ತೇನೆ, ಬೇರೆ ಪಕ್ಷ ಸೇರುತ್ತೇನೆ ಎಂದು ಯಾವತ್ತೂ ಹೇಳಿಲ್ಲ, ಪಕ್ಷದ ಸಂಘಟನೆ ಬಗ್ಗೆ ಮಾತಾಡಿದ್ದೇನೆ ಮತ್ತು ಅದನ್ನು ಬಲಪಡಿಸಿ 2028ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಆಂಧ್ರ ಕೋಟಾದಡಿ ರಾಜ್ಯಸಭೆ ಪ್ರವೇಶಿಸಲು ಶ್ರೀರಾಮುಲು ಪ್ಲಾನ್: ರೆಡ್ಡಿ ಜತೆಗಿನ ಮುನಿಸನ್ನೇ ಲಾಭವಾಗಿಸಿಕೊಳ್ಳಲು ತಂತ್ರ