Nalin Kumar Kateel; ರಾಜ್ಯದಲ್ಲಿ ಹಿಂಸಾಚಾರ ಆರಂಭವಾಗಿದೆ, ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಸಿಎಂ ಸ್ಥಾನಕ್ಕಾಗಿ ಜಗಳ ಮಾಡುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್
ಇಷ್ಟರಲ್ಲೇ ಮಳೆಗಾಲ ಶುರುವಾಗಲಿರುವುದರಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು, ಆದರೆ ಕಾಂಗ್ರೆಸ್ ನಾಯಕರೆಲ್ಲ ದೆಹಲಿಯಲ್ಲಿ ಕೂತು ಬಡಿದಾಡುತ್ತಿದ್ದಾರೆ ಎಂದು ಕಟೀಲ್ ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಜನ ಪೂರ್ಣಪ್ರಮಾಣದ ಬಹುಮತ ನೀಡಿದ್ದರೂ ಅದರ ಇಬ್ಬರು ನಾಯಕರು ದೆಹಲಿಯಲ್ಲಿ ಮುಖ್ಯಮಂತ್ರಿ ಜಗಳ ಮಾಡುತ್ತಾ ಕೂತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಲೇವಡಿ ಮಾಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ರಾಜ್ಯದಲ್ಲಿ ಈಗಾಗಲೇ ಹಿಂಸಾಚಾರ (violence) ದೊಂಬಿ ಆರಂಭವಾಗಿದೆ, ಕಾಂಗ್ರೆಸ್ ಅಧಿಕಾರವಹಿಸಿಕೊಳ್ಳುವ ಮೊದಲೇ ಶಾಂತಿ ಸುವ್ಯವಸ್ಥೆ (law and order) ಹಾಳಾಗಿದೆ ಎಂದು ಕಟೀಲ್ ಹೇಳಿದರು. ಕೊಟ್ಟಿರುವ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಪಕ್ಷ ಈಗಾಗಲೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿತ್ತು ಮತ್ತು ಇಷ್ಟರಲ್ಲೇ ಮಳೆಗಾಲ ಶುರುವಾಗಲಿರುವುದರಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು, ಆದರೆ ಕಾಂಗ್ರೆಸ್ ನಾಯಕರೆಲ್ಲ ದೆಹಲಿಯಲ್ಲಿ ಕೂತು ಬಡಿದಾಡುತ್ತಿದ್ದಾರೆ ಎಂದು ಕಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ