Karnataka Assembly Polls: ಕಾಂಗ್ರೆಸ್ ನಾಯಕರು ಕ್ರಿಮಿನಲ್ ಮತ್ತು ರಾಷ್ಟ್ರದ್ರೋಹಿಗಳ ಜೊತೆ ಕೈಜೋಡಿಸಿದ್ದಾರೆ: ಶೋಭಾ ಕರಂದ್ಲಾಜೆ

ಅರುಣ್​ ಕುಮಾರ್​ ಬೆಳ್ಳಿ

Updated on: Apr 20, 2023 | 12:45 PM

ಕೇರಳದಲ್ಲಿ ಹಸುವೊಂದನ್ನು ನಡುರಸ್ತೆಯಲ್ಲಿ ವಧಿಸಿ ಅದರೊಂದಿಗೆ ರಕ್ತದೋಕುಳಿಯಾಡಿದ ರಿಜಿಲ್ ಮಕ್ಕುಟ್ಟಿಯನ್ನ ಯುವ ಕಾಂಗ್ರೆಸ್ ಮೋರ್ಚಾದ ಅಧ್ಯಕ್ಷ ಮಾಡಲಾಗುತ್ತದೆ ಎಂದು ಶೋಭಾ ಹೇಳಿದರು.

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಕ್ರಿಮಿನಲ್ ಗಳ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ಮತ್ತು ರಾಷ್ಟ್ರವಿರೋಧಿಗಳ ಜೊತೆ ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರು ಗೋಹತ್ಯೆ ನಿಷೇಧ ಕಾನೂನನ್ನು ವಾಪಸ್ಸು ಪಡೆಯುವುದಾಗಿ ಹೇಳುತ್ತಾರೆ. 5-6 ವರ್ಷಗಳ ಹಿಂದೆ ಕೇರಳದಲ್ಲಿ ಹಸುವೊಂದನ್ನು ನಡುರಸ್ತೆಯಲ್ಲಿ ವಧಿಸಿ ಅದರೊಂದಿಗೆ ರಕ್ತದೋಕುಳಿಯಾಡಿದ ರಿಜಿಲ್ ಮಕ್ಕುಟ್ಟಿಯನ್ನ ಯುವ ಕಾಂಗ್ರೆಸ್ ಮೋರ್ಚಾದ ಅಧ್ಯಕ್ಷ ಮಾಡಲಾಗುತ್ತದೆ. ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಹೇಳಿದ ಶೋಭಾ ಫೋಟೋಗಳನ್ನು ಮಾಧ್ಯಮದವರಿಗೆ ತೋರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.