ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ, ಕಾಂಗ್ರೆಸ್ ನಾಯಕರಿಂದ ರಾಮನಗರದಲ್ಲಿ ಪಾದಯಾತ್ರೆ
ಕರ್ನಾಟಕದಲ್ಲಿ ಪಾದಯಾತ್ರೆಯನ್ನು ರಾಮನಗರದಲ್ಲಿ ಆಯೋಜಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲೆಯ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಇನ್ನೂ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸ್ವಾಗತಕ್ಕೆ ಭಾರೀ ಗಾತ್ರದ ಸೇಬುಹಣ್ಣುಗಳ ಹಾರ ತಯಾರಾಗಿರುವುದನ್ನು ನೋಡಬಹುದು.
ರಾಮನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ಇದೇ ದಿನ ಅಂದರೆ ಸೆಪ್ಟೆಂಬರ್ 7 ರಂದು ಆರಂಭಿಸಿದ್ದರು. ಅವರ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೇಶ ನಾನಾ ಭಾಗಗಳಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು (padayatre) ಹಮ್ಮಿಕೊಂಡಿದ್ದಾರೆ. ಕರ್ನಾಟಕದಲ್ಲಿ ಪಾದಯಾತ್ರೆಯನ್ನು ರಾಮನಗರದಲ್ಲಿ ಆಯೋಜಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲೆಯ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಇನ್ನೂ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ನಗರದಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸ್ವಾಗತಕ್ಕೆ ಭಾರೀ ಗಾತ್ರದ ಸೇಬುಹಣ್ಣುಗಳ ಹಾರ ತಯಾರಾಗಿರುವುದನ್ನು ಇಲ್ಲಿ ನೋಡಬಹುದು. ಅದನ್ನು ಗಣ್ಯರ ಕೊರಳಿಗೆ ಹಾಕಲು ಒಂದು ಕ್ರೇನ್ ಅನ್ನೂ ಗೊತ್ತು ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
