ಆಪರೇಷನ್ ಸಿಂಧೂರ ಭರ್ಜರಿ ಯಶಸ್ಸು: ಟೌನ್​​ಹಾಲ್​ನಲ್ಲಿ ಕಾಂಗ್ರೆಸ್ ನಾಯಕರಿಂದ ಜೈ ಹಿಂದ್ ಕಾರ್ಯಕ್ರಮ

ಅರುಣ್​ ಕುಮಾರ್​ ಬೆಳ್ಳಿ

Updated on: May 28, 2025 | 1:01 PM

ಆರ್ಮಿ ಜಾಕೆಟ್ ಧರಿಸಿದ ಸಿದ್ದರಾಮಯ್ಯ, ಶಿವಕುಮಾರ್, ಸುರ್ಜೆವಾಲ, ವೇಣುಗೋಪಾಲ್ ಮೊದಲಾದವರೆಲ್ಲ ಹೆಮ್ಮೆ ಮತ್ತು ಅಭಿಮಾನದಿಂದ ಬೀಗುತ್ತಿದ್ದರು. ಆ ಜಾಕೆಟ್​ನ ಮಹಿಮೆಯೇ ಅಂಥದ್ದು, ಧರಿಸಿದ ಕೂಡಲೇ ನಾವೂ ಸೈನಿಕರು ಎಂಬ ಭಾವನೆ ಮನದಲ್ಲಿ ಮೂಡಿಬಿಡುತ್ತದೆ. ಹಿಂದೊಮ್ಮೆ ದೇಶಕ್ಕಾಗಿ ತಮ್ಮ ಜೀವವನ್ನು ಒತ್ತೆಯಿಟ್ಟು, ಕುಟುಂಬಗಳಿಂದ ವರ್ಷಗಳವರೆಗೆ ದೂರವಿದ್ದು ದೇಶವನ್ನು ಸುರಕ್ಷಿವಾಗಿಟ್ಟ ಮಾಜಿ ಯೋಧರಿಂದ ಜಾಕೆಟ್ ತೊಡಿಸಿಕೊಳ್ಳುವುದು ಸಾಮಾನ್ಯ ಮಾತೇ?

ಬೆಂಗಳೂರು, ಮೇ 28: ಪಾಕಿಸ್ತಾನ ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಭಾರತೀಯ ಸೇನೆಯ ಆಪರೇಶನ್ ಸಿಂಧೂರ (Operation Sindoor) ಸಾಧಿಸಿದ ಮಹಾನ್ ಯಶಸ್ಸನ್ನು ಆಚರಿಸಲು ಕರ್ನಾಟಕ ಸರ್ಕಾರ ಇಂದು ಬೆಂಗಳೂರಿನ ಟೌನ್ ಹಾಲ್​ನಲ್ಲಿ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಿತ್ತು. ಸಶಸ್ತ್ರ ಪಡೆಗಳ ಮಾಜಿ ಅಧಿಕಾರಿಗಳು, ಯೋಧರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ ಮತ್ತು ಹಲವಾರು ಗಣ್ಯರು ಭಾಗಿಯಾಗಿದ್ದರು. ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಇತರ ಪ್ರಮುಖರಿಗೆ ಯೋಧರು ಧರಿಸುವ ಜಾಕೆಟ್ ತೊಡಿಸಿದ್ದು ಕಾರ್ಯಕ್ರಮದ ಆಕರ್ಷಣೆಗಳಲ್ಲೊಂದಾಗಿತ್ತು.

ಇದನ್ನೂ ಓದಿ:    Operation Sindoor: ದೇಶದ ಹೆಣ್ಣುಮಕ್ಕಳಿಗೆ ‘ಆಪರೇಷನ್ ಸಿಂಧೂರ’ ಅರ್ಪಿಸಿದ ಪ್ರಧಾನಿ ಮೋದಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.