Congress leaders pay homage: ಕೆಸಿ ವೇಣುಗೋಪಾಲ್ ಗೆ ಆರ್ ಧ್ರುವನಾರಾಯಣ ಮಕ್ಕಳನ್ನು ಪರಿಚಯಿಸಿದ ಸಿದ್ದರಾಮಯ್ಯ

|

Updated on: Mar 11, 2023 | 5:43 PM

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಹಿಂದೆ ರಾಜ್ಯದ ಎಐಸಿಸಿ ಉಸ್ತುವಾರಿಯಾಗಿದ್ದ ಕೆಸಿ ವೇಣುಗೋಪಾಲ್ ಅವರಿಗೆ ಧ್ರುವನಾರಾಯಣರ ಇಬ್ಬರು ಪುತ್ರರನ್ನು ಪರಿಚಯಿಸಿದರು.

ಮೈಸೂರು: ಅಗಲಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ (R Dhruvanarayana) ಅವರ ಅಂತಿಮ ದರ್ಶನ ಪಡೆಯಲು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಮುಖ ಕಾಂಗ್ರೆಸ್ ನಾಯಕರು ಆಗಮಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು (Siddaramaiah) ಹಿಂದೆ ರಾಜ್ಯದ ಎಐಸಿಸಿ ಉಸ್ತುವಾರಿಯಾಗಿದ್ದ ಕೆಸಿ ವೇಣುಗೋಪಾಲ್ (KC Venugopal) ಅವರಿಗೆ ಧ್ರುವನಾರಾಯಣರ ಇಬ್ಬರು ಪುತ್ರರನ್ನು ಪರಿಚಯಿಸಿದರು. ವಿಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ಸಲೀಂ ಅಹ್ಮದ್ ಮೊದಲಾದವರನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ