ವಿಕೋಪ ಅಲರ್ಟ್ ಟ್ರಯಲ್ ಶಬ್ಧಕ್ಕೆ ಕಾಂಗ್ರೆಸ್ ನಾಯಕರು ಗಲಿಬಿಲಿ, ಬಿಜೆಪಿಯವರೂ ಅಲರ್ಟ್ ಆಗಲಿ ಎಂದ ಡಿಕೆಶಿ

ವಿಕೋಪ ಅಲರ್ಟ್ ಟ್ರಯಲ್ ಶಬ್ಧಕ್ಕೆ ಕಾಂಗ್ರೆಸ್ ನಾಯಕರು ಗಲಿಬಿಲಿ, ಬಿಜೆಪಿಯವರೂ ಅಲರ್ಟ್ ಆಗಲಿ ಎಂದ ಡಿಕೆಶಿ

ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on: Oct 12, 2023 | 12:58 PM

Emergency Alert Message: ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಷಣ ಮಾಡುತ್ತಿದ್ದ ವೇಳೆ ವಿಕೋಪ ಅಲರ್ಟ್ ಟ್ರಯಲ್ ಮೆಸೇಜ್ ಮತ್ತು ಬೀಪ್​ ಸೌಂಡ್ ಬಂದಿದೆ. ಏಕಕಾಲಕ್ಕೆ ಹತ್ತಾರು ಮೊಬೈಲ್​ಗಳು ಸದ್ದು ಮಾಡಿದ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೆಲಕಾಲ ಗಲಿಬಿಲಿಗೊಂಡರು.

ಬೆಂಗಳೂರು, ಅ.12: ದೇಶದಲ್ಲಿ ನೈಸರ್ಗಿಕ ವಿಕೋಪ ಅಥವಾ ಎಮರ್ಜೆನ್ಸಿ ಸಂದರ್ಭದಲ್ಲಿ ಜನರನ್ನು ಎಚ್ಚರಿಸಲು ಮೊಬೈಲ್‌ಗಳಿಗೆ ತುರ್ತು ಸಂದೇಶ ರವಾನಿಸುವ ಹೊಸ ಟೆಕ್ನಾಲಜಿಯ ಪ್ರಯೋಗ ನಡೆಯುತ್ತಿದೆ ( Emergency Alert Message). ಹೀಗಾಗಿ ಇಂದು ಏಕಕಾಲದಲ್ಲಿ ಸಿಮ್​ಗೆ ಅನುಸಾರವಾಗಿ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಮತ್ತು ಬೀಪ್​ ಸೌಂಡ್ ಬಂದಿದೆ. ಇದರಿಂದ ಕೆಲವರು ಆತಂಕಗೊಂಡಿದ್ದು ಈ ಶಬ್ಧ ಏನಿರಬಹುದು ಎಂಬ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ. ಸದ್ಯ ಇದೇ ರೀತಿಯ ಗೊಂದಲದ ಘಟನೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನಡೆದಿದೆ.

ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಷಣ ಮಾಡುತ್ತಿದ್ದ ವೇಳೆ ವಿಕೋಪ ಅಲರ್ಟ್ ಟ್ರಯಲ್ ಮೆಸೇಜ್ ಮತ್ತು ಬೀಪ್​ ಸೌಂಡ್ ಬಂದಿದೆ. ಏಕಕಾಲಕ್ಕೆ ಹತ್ತಾರು ಮೊಬೈಲ್​ಗಳು ಸದ್ದು ಮಾಡಿದ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೆಲಕಾಲ ಗಲಿಬಿಲಿಗೊಂಡರು. ಆಗ ಮಾಧ್ಯಮಪ್ರತಿನಿಧಿಗಳು, ಈ ಶಬ್ದ ವಿಕೋಪ ಮಾಹಿತಿ ಅಲಾರ್ಮ್ ಎಂದು ತಿಳಿಸಿದ್ದು ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟರು. ಈ ವೇಳೆ ಭಾಷಣ ಮಾಡುತ್ತಿದ್ದ ಡಿಕೆ ಶಿವಕುಮಾರ್ ಅವರು, ಬಿಜೆಪಿಯವರೂ ಅಲರ್ಟ್ ಆಗಲಿ ಬಿಡಿ ಎಂದು ನಗೆಚಟಾಕಿ ಹಾರಿಸಿದರು.

ನೈಸರ್ಗಿಕ ವಿಕೋಪ ಇತ್ಯಾದಿ ತುರ್ತು ಸಂದರ್ಭಗಳಲ್ಲಿ ಜನಸಾಮಾನ್ಯರಿಗೆ ಅಲರ್ಟ್ ಹೊರಡಿಸಲು ದೂರಸಂಪರ್ಕ ಇಲಾಖೆ ಮೂಲಕ ಎಲ್ಲರ ಮೊಬೈಲ್​ಗಳಿಗೆ ಈ ತುರ್ತು ಸಂದೇಶಗಳನ್ನು ಕಳುಹಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ