ಜೆಡಿಎಸ್ ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ! ಜೆಡಿಎಸ್ ಕಚೇರಿಗೆ ಲಾರಿ ಕಳಿಸಿ ಅಣುಕು ಪ್ರದರ್ಶನ
ಕರ್ನಾಟಕವನ್ನು ಪ್ರತಿಭಟನೆಗಳ ರಾಜ್ಯವೆಂದು ಕರೆಯಲು ಅಭ್ಯಂತರವಿಲ್ಲ ಎನಿಸುತ್ತದೆ. ರಾಜ್ಯದ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಪ್ರತಿಭಟನೆ ಮಾಡುತ್ತಿವೆ. ಬೆಲೆಯೇರಿಕೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ ಈ ಎರಡೂ ಪಕ್ಷಗಳ ವಿರುದ್ಧ ಕಾಂಗ್ರೆಸ್ ಪ್ರದರ್ಶನಗಳನ್ನು ನಡೆಸುತ್ತಿದೆ!
ಬೆಂಗಳೂರು, ಏಪ್ರಿಲ್ 12: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಅಂತ ಆರೋಪಿಸಿ ಜೆಡಿಎಸ್ ಮುಖಂಡರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ನಾಯಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ ವಿರುದ್ಧ ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರ ಮುಖವಾಡ ಧರಿಸಿದ ವ್ಯಕ್ತಿಯೊಬ್ಬನ ಕೈಯಲ್ಲಿ ಒಂದು ಸೂಟ್ ಕೇಸಿದ್ದು ಅದರ ಮೇಲೆ, ನನ್ನ ಬಳಿ ಟನ್ಗಟ್ಟಲೆ ದಾಖಲೆಗಳಿವೆ ಬ್ರದರ್ ಆದರೆ ನೀಡಲು ವಾಹನದ ಕೊರತೆ ಇದೆ ಎಂದು ಬರೆದಿದ್ದಾರೆ. ಜೆಡಿಎಸ್ ಕಚೇರಿಗೆ ಲಾರಿ ಕಳಿಸಿ ಅಣಕು ಪ್ರದರ್ಶನವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮಾಡಿದರು.
ಇದನ್ನೂ ಓದಿ: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಂಪುಟ ತೀರ್ಮಾನ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ