ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದಲ್ಲಿನ ಗೊಂದಲಗಳ ಬಗ್ಗೆ ಚರ್ಚಿಸಿದರು. ಗೊಂದಲಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಜಾರಕಿಹೊಳಿ ಮನವಿ ಮಾಡಿದರು. ಖರ್ಗೆಯವರು ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಯಾವುದೇ ವಿಳಂಬವಿಲ್ಲದೆ ಸಮಸ್ಯೆಗಳನ್ನು ಬಗೆಹರಿಸಬೇಕೆಂಬುದು ಇಡೀ ಪಕ್ಷದ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.
ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ ಮಾಡಿದರು. ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತಂದಿರುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಿರುವುದಾಗಿ ಜಾರಕಿಹೊಳಿ ಹೇಳಿದ್ದಾರೆ.
ಆದಷ್ಟು ಬೇಗ ನಿರ್ಣಯ ಕೈಗೊಳ್ಳುವುದಾಗಿ ಮತ್ತು ಗೊಂದಲಗಳನ್ನು ತ್ವರಿತವಾಗಿ ಬಗೆಹರಿಸುವುದಾಗಿ ಖರ್ಗೆ ಭರವಸೆ ನೀಡಿದ್ದಾರೆ. ಈ ಕುರಿತು ಈಗಾಗಲೇ ಒಂದು ತೀರ್ಮಾನಕ್ಕೆ ಬರಲಾಗಿದೆ ಎಂದೂ ಖರ್ಗೆ ಮಾಹಿತಿ ನೀಡಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಪದೇ ಪದೇ ಅಧಿಕಾರದ ಗೊಂದಲಗಳು ಮತ್ತು ಹೇಳಿಕೆಗಳು ಬರದಂತೆ ಪೂರ್ಣವಿರಾಮ ಹಾಕಿ ಈ ಸಮಸ್ಯೆಗೆ ಶೀಘ್ರ ಇತ್ಯರ್ಥ ಸಿಗಬೇಕೆಂಬುದು ನಮ್ಮ ನಿರೀಕ್ಷೆ. ಯಾವುದೇ ವಿಳಂಬವಿಲ್ಲದೆ ಇದು ಬೇಗ ಮುಗಿದರೆ ಒಳ್ಳೆಯದು ಎಂದು ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
