Loading video

ಎರಡು ವರ್ಷವಾದರೂ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ವಿರುದ್ಧ ಮಾಡಿದ ಆರೋಪ ಪ್ರೂವ್ ಮಾಡಲಾಗಿಲ್ಲ: ಪ್ರತಾಪ್ ಸಿಂಹ

Updated on: May 19, 2025 | 5:17 PM

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ 48 ಅಗತ್ಯ ವಸ್ತುಗಳ ಬೆಲೆಯೇರಿಕೆ ಅಗಿದೆ, ಪೆಟ್ರೋಲಿಯಂ ಪದಾರ್ಥಗಳ ಮೇಲೆ ಸೆಸ್ ಹೆಚ್ಚಳ ಹೆಚ್ಚಿಗೆಯಾಗಿದೆ, ಆಕ್ಯುಪೇಷನ್ ಸರ್ಟಿಫಿಕೇಟ್ ಪಡೆಯಬೇಕಾದರೆ ಪ್ರತಿ ಚದರ ಅಡಿಗೆ ಈಗ ₹100ರ ಬದಲ ₹250 ಕಕ್ಕಬೇಕು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳನ್ನು ಬಯ್ಯುವುದು ಬಿಟ್ಟು ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.

ಮಡಿಕೇರಿ, ಮೇ 19: ಮಾಜಿ ಸಂಸದ ಪ್ರತಾಪ್ ಸಿಂಹ ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿ ಸರ್ಕಾರ (BJP government) ಅಧಿಕಾರದಲ್ಲಿದ್ದಾಗ ಪೇಸಿಎಮ್, 40 ಪರ್ಸೆಂಟ್ ಸರ್ಕಾರ, ಬಿಟ್ ಕಾಯಿನ್ ಹಗರಣ ಅಂತೆಲ್ಲ ಆರೋಪಗಳನ್ನು ಮಾಡಿದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಒಂದೇ ಒಂದು ಆರೋಪವನ್ನು ಸಾಬೀತು ಮಾಡೋದು ಸಾಧ್ಯವಾಗಲಿಲ್ಲ ಎಂದು ಹೇಳಿದರು. ಬರೀ ಸುಳ್ಳುಗಳನ್ನು ಹೇಳಿ ಅಮಾಯಕ ಜನರಿಗೆ ಗ್ಯಾರಂಟಿ ಯೋಜನೆಗಳ ಆಮಿಶವೊಡ್ಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಏನೂ ಮಾಡದೆ ಸಾಧನೆ ಸಮಾವೇಶ ಮಾಡಹೊರಟಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಇದನ್ನೂ ಓದಿ:  ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿಡಿದೆದ್ದ ಸ್ವಪಕ್ಷದ ಮುಖಂಡರು, ಉಚ್ಚಾಟನೆಗೆ ಪತ್ರ..!

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ