AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಟೋಲ್​ ಸಂಗ್ರಹಕ್ಕೆ ಭಾರೀ ವಿರೋಧ, ಟೋಲ್​ ಧ್ವಂಸ ಎಚ್ಚರಿಕೆ

ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಟೋಲ್​ ಸಂಗ್ರಹಕ್ಕೆ ಭಾರೀ ವಿರೋಧ, ಟೋಲ್​ ಧ್ವಂಸ ಎಚ್ಚರಿಕೆ

ವಿವೇಕ ಬಿರಾದಾರ
|

Updated on:Mar 14, 2023 | 10:26 AM

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಇಂದಿನಿಂದ ಟೋಲ್​ ಸಂಗ್ರಹ ಪ್ರಾರಂಭವಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಮತ್ತು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಇಂದಿನಿಂದ ಟೋಲ್​ ಸಂಗ್ರಹ ಪ್ರಾರಂಭವಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಹಾಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿಯ ಟೋಲ್ ಪ್ಲಾಜಾ ಎದುರು ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್​ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಿದ್ದಾರೆ. ಸದ್ಯ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್​ನಲ್ಲಿ ಕರೆದೊಯ್ದಿದ್ದಾರೆ.

Published on: Mar 14, 2023 10:24 AM