‘ಕೈ’ ಪ್ರಣಾಳಿಕೆ ಪರಿಣಾಮವೇ? ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು!

ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಮಹಿಳೆಯರು ಅಂಚೆ ಕಚೇರಿಯತ್ತ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ನಿಯಂತ್ರಣ ಸಾಧ್ಯವಾಗದೆ ಅಂಚೆ ಸಿಬ್ಬಂದಿಯಿಂದ ಟೋಕ‌ನ್ ವಿತರಣೆ ಮಾಡಲಾಗುತ್ತಿದೆ. ಬೆಳಗ್ಗೆ 4 ಗಂಟೆಗೇ ಟೋಕನ್ ವಿತರಣೆ ಆರಂಭವಾಗುತ್ತಿದೆ. ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಕ್ಯೂ ನಿಂತು ಟೋಕನ್ ಪಡೆಯುತ್ತಿದ್ದಾರೆ.

‘ಕೈ’ ಪ್ರಣಾಳಿಕೆ ಪರಿಣಾಮವೇ? ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು!
| Updated By: ಗಣಪತಿ ಶರ್ಮ

Updated on:May 29, 2024 | 2:53 PM

ಬೆಂಗಳೂರು, ಮೇ 29: ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಗೆ (Bengaluru Post Office) ಖಾತೆ ತೆರೆಯುವುದಕ್ಕಾಗಿ ಕಳೆದ ಎರಡು ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂ. ನೀಡುವ ‘ಮಹಾಲಕ್ಷ್ಮಿ’ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ (Congress Manifesto) ಉಲ್ಲೇಖಿಸಿದ ಮತ್ತು ಆ ಬಗ್ಗೆ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆ ನೀಡಿದ್ದರ ಪರಿಣಾಮ ಇದು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಪ್ರಣಾಳಿಕೆ ಬಿಡುಗಡೆಯಾಗಿ ಹಲವಾರು ದಿನ ಕಳೆದ ನಂತರ ಈ ಬೆಳವಣಿಗೆಯಾಗಿರುವುದು ಕುತೂಹಲ ಮೂಡಿಸಿದೆ.

‘ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ’ ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಕಳೆದ 15 ದಿನದಿಂದ ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಖಾತೆ ತೆರೆಯುವುದಕ್ಕಾಗಿ ಮಹಿಳೆಯರು ಅಂಚೆ ಕಚೇರಿಗೆ ಬರುತ್ತಿದ್ದಾರೆ. ಮಹಿಳೆಯರ ನಿಯಂತ್ರಣಕ್ಕೆ ಬೆಂಗಳೂರಿನ ಅಂಚೆ ಕೇಂದ್ರ ಕಚೇರಿ ಸಿಬ್ಬಂದಿ ಹೈರಾಣಾಗಿದ್ದಾರೆ.

ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಮಹಿಳೆಯರು ಅಂಚೆ ಕಚೇರಿಯತ್ತ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ನಿಯಂತ್ರಣ ಸಾಧ್ಯವಾಗದೆ ಅಂಚೆ ಸಿಬ್ಬಂದಿಯಿಂದ ಟೋಕ‌ನ್ ವಿತರಣೆ ಮಾಡಲಾಗುತ್ತಿದೆ. ಬೆಳಗ್ಗೆ 4 ಗಂಟೆಗೇ ಟೋಕನ್ ವಿತರಣೆ ಆರಂಭವಾಗುತ್ತಿದೆ. ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಕ್ಯೂ ನಿಂತು ಟೋಕನ್ ಪಡೆಯುತ್ತಿದ್ದಾರೆ.

ಬುಧವಾರ ಕೂಡ ಮಧ್ಯಾಹ್ನವಾದರೂ ಅಂಚೆ ಕಚೇರಿಗೆ ಮಹಿಳೆಯರ ದಂಡೇ ಹರಿದುಬರುತ್ತಿದೆ. ಎಲ್ಲಿ ಬೇಕಿದ್ದರೂ ಖಾತೆ ಮಾಡಿಸಬಹುದು ಅಂದರೂ ಕೇಳದೆ ಪ್ರಧಾನ ಕಚೇರಿಗೇ ತಂಡೋಪತಂಡವಾಗಿ ಬರುತ್ತಿದ್ದಾರೆ. ಹೀಗಾಗಿ ಅಂಚೆಕಚೇರಿಯ ಮುಖ್ಯದ್ವಾರ ಸದ್ಯ ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಅಕೌಂಟ್​​ಗೆ ಹಣ ಬರಲ್ಲವೆಂದು ಬೋರ್ಡ್

ಸದ್ಯ ಖಾತೆ ಮಾತ್ರ ತೆರೆಯಲಾಗುತ್ತಿದೆ. ಈ ಖಾತೆ ಮೂಲಕ ವಿವಿಧ ಪ್ರಾಧಿಕಾರಗಳಿಗೆ ಹಣ ಪಾವತಿಸಬಹುದು. ಆದರೆ, ಖಾತೆಗೆ ಹಣ ಬರುತ್ತದೆ ಎಂಬುದು ವದಂತಿ ಎಂದು ಬೋರ್ಡ್ ಹಾಕಲಾಗಿದೆ. ಇಲ್ಲಿ ಕೇವಲ ಖಾತೆ ಮಾಡಿಕೊಡಲಾಗುತ್ತಿದೆ . ಖಾತೆಗೆ ಹಣ ಹಾಕುತ್ತಿಲ್ಲ ಎಂದು ಬೋರ್ಡ್​ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Wed, 29 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್