AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ

ಕಾಂಗ್ರೆಸ್​ನಲ್ಲಿ ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ

ಪ್ರಸನ್ನ ಗಾಂವ್ಕರ್​
| Edited By: |

Updated on:Sep 26, 2026 | 7:25 PM

Share

ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆ ಭರವಸೆಗಳ ಈಡೇರಿಕೆಗೆ ಸ್ವಪಕ್ಷ ನಾಯಕರಾದ ಬಿಆರ್​ ಪಾಟೀಲ್ ಮತ್ತು ಬಿಕೆ ಹರಿಪ್ರಸಾದ್ ಅವರಿಂದ ತೀವ್ರ ಒತ್ತಡ ಹೆಚ್ಚಾಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸಾತಿ, ಓಪಿಎಸ್ ಜಾರಿ ಸೇರಿದಂತೆ ಹಲವು ಭರವಸೆಗಳು ಈಡೇರಿಲ್ಲ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾರರ ವಿಶ್ವಾಸ ಉಳಿಸಿಕೊಳ್ಳಲು ತಕ್ಷಣ ಅನುಷ್ಠಾನಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 26: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಪ್ರಣಾಳಿಕೆ ಭರವಸೆಗಳ ಜಾರಿ ವಿಚಾರವಾಗಿ ಹಿರಿಯ ನಾಯಕರೇ ಇದೀಗ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ಆಳಂದ ಶಾಸಕ ಬಿ.ಆರ್. ಪಾಟೀಲ್ ಪ್ರಣಾಳಿಕೆಯ ಅಂಶಗಳನ್ನೇ ಮುಂದಿಟ್ಟುಕೊಂಡು ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಬಿಆರ್ ಪಾಟೀಲ್ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್​ ಕೂಡ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿ ಎಂದು, ಸಿಎಂ ಡಿಕೆ ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Sep 26, 2026 06:23 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More