AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಕಾಂಗ್ರೆಸ್ ಸರ್ಕಾರ ಬರೋದು ಕಷ್ಟ! ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಶಾಸಕ ಬಾಲಕೃಷ್ಣ ಶಾಕಿಂಗ್ ಮಾತು

ಮುಂದೆ ಕಾಂಗ್ರೆಸ್ ಸರ್ಕಾರ ಬರೋದು ಕಷ್ಟ! ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಶಾಸಕ ಬಾಲಕೃಷ್ಣ ಶಾಕಿಂಗ್ ಮಾತು

ಗಣಪತಿ ಶರ್ಮಾ
|

Updated on: Feb 27, 2026 | 8:26 AM

Share

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ಶಾಸಕರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿದ ಬಗ್ಗೆ ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ಬರುವುದು ಕಷ್ಟವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಾಲಕೃಷ್ಣ ಮಾತಿನ ವಿಡಿಯೋ ಇಲ್ಲಿದೆ.

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಸಂಘರ್ಷ ಮುಂದುವರಿದಿದ್ದು, ಗುರುವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬಣದ 40ಕ್ಕೂ ಹೆಚ್ಚು ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಪ್ರತಿಕ್ರಿಯಿಸಿ, ನನ್ನ ಹುಟ್ಟು ಹಬ್ಬದ ನಿಮಿತ್ತ ಈ ಔತಣಕೂಟ ಆಯೋಜಿಸಲಾಗಿತ್ತು ಎಂದರು. ಅಲ್ಲದೆ, ಸದ್ಯದ ಪರಿಸ್ಥಿತಿಯಲ್ಲಿ ಮುಂದುವರೆದರೆ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುವುದು ಕಷ್ಟವಿದೆ. ಹೀಗಾಗಿ, ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು ಎಂಬ ಚರ್ಚೆ ನಡೆದಿದೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us