ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ಗೆ ಆಗ್ರಹಿಸಿ ರಾಹುಲ್ ಗಾಂಧಿಗೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಕಾಯ್ದೆಯ 79A, 79B, 79C ಸೆಕ್ಷನ್‌ಗಳನ್ನು ಮರುಜಾರಿಗೊಳಿಸಲು ಒತ್ತಾಯಿಸಿದ್ದಾರೆ. ಚುನಾವಣೆ ವೇಳೆ ಈ ಬಗ್ಗೆ ಭರವಸೆ ನೀಡಲಾಗಿದ್ದ ಹಿನ್ನೆಲೆ ಪತ್ರದ ಜೊತೆ ಪ್ರಣಾಳಿಕೆಯ ಕಾಪಿ ಲಗತ್ತಿಸಿ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 30: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ಗೆ ಆಗ್ರಹಿಸಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಪತ್ರ ಬರೆದಿದ್ದಾರೆ. ಚುನಾವಣೆ ವೇಳೆ ಈ ಬಗ್ಗೆ ಭರವಸೆ ನೀಡಲಾಗಿದ್ದ ಹಿನ್ನೆಲೆ ಪತ್ರದ ಜೊತೆ ಪ್ರಣಾಳಿಕೆಯ ಕಾಪಿ ಲಗತ್ತಿಸಿ ಆಗ್ರಹಿಸಿದ್ದಾರೆ. ಕಾಯ್ದೆಯ 79A, 79B, 79C ಮರುಜಾರಿಗೆ ಪಾಟೀಲ್ ಒತ್ತಾಯಿಸಿದ್ದು, ರೈತ ವಿರೋಧಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸರ್ಕಾರ ವಿಫಲವಾಗಿದೆ. 2021ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 19.92 ಲಕ್ಷ ಎಕರೆ ಕೃಷಿ ಭೂಮಿ ಮಾರಾಟವಾಗಿದೆ. ಮಾರಾಟವಾದ ಶೇ.60ರಷ್ಟು ಭಾಗ ಉತ್ತರ ಕರ್ನಾಟಕದಲ್ಲೇ ನಡೆದಿದೆ. ಆ ಪೈಕಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳು ಮುಂಚೂಣಿಯಲ್ಲಿವೆ. ಕಾಯ್ದೆಯ 79ಎ, ಬಿ ಮತ್ತು ಸಿ ಸೆಕ್ಷನ್‌ಗಳನ್ನು ಮರುಸ್ಥಾಪಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಪರಮೇಶ್ವರ್ ಲಿಖಿತ ಉತ್ತರ ನೀಡಿದ್ದಾರೆ ಎಂದು ಬಿ.ಆರ್.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

