ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ ಗಾಂಧಿಗೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಪತ್ರ

Edited By:

Updated on: Sep 30, 2026 | 11:33 AM

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಕಾಯ್ದೆಯ 79A, 79B, 79C ಸೆಕ್ಷನ್‌ಗಳನ್ನು ಮರುಜಾರಿಗೊಳಿಸಲು ಒತ್ತಾಯಿಸಿದ್ದಾರೆ. ಚುನಾವಣೆ ವೇಳೆ ಈ ಬಗ್ಗೆ ಭರವಸೆ ನೀಡಲಾಗಿದ್ದ ಹಿನ್ನೆಲೆ ಪತ್ರದ ಜೊತೆ ಪ್ರಣಾಳಿಕೆಯ ಕಾಪಿ ಲಗತ್ತಿಸಿ ಅವರು ಮನವಿ ಮಾಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 30: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿಗೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಪತ್ರ ಬರೆದಿದ್ದಾರೆ. ಚುನಾವಣೆ ವೇಳೆ ಈ ಬಗ್ಗೆ ಭರವಸೆ ನೀಡಲಾಗಿದ್ದ ಹಿನ್ನೆಲೆ ಪತ್ರದ ಜೊತೆ ಪ್ರಣಾಳಿಕೆಯ ಕಾಪಿ ಲಗತ್ತಿಸಿ ಆಗ್ರಹಿಸಿದ್ದಾರೆ. ಕಾಯ್ದೆಯ 79A, 79B, 79C ಮರುಜಾರಿಗೆ ಪಾಟೀಲ್ ಒತ್ತಾಯಿಸಿದ್ದು, ರೈತ ವಿರೋಧಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸರ್ಕಾರ ವಿಫಲವಾಗಿದೆ. 2021ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 19.92 ಲಕ್ಷ ಎಕರೆ ಕೃಷಿ ಭೂಮಿ ಮಾರಾಟ‌‌ವಾಗಿದೆ. ಮಾರಾಟವಾದ ಶೇ.60ರಷ್ಟು ಭಾಗ ಉತ್ತರ ಕರ್ನಾಟಕದಲ್ಲೇ ನಡೆದಿದೆ. ಆ ಪೈಕಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳು ಮುಂಚೂಣಿಯಲ್ಲಿವೆ. ಕಾಯ್ದೆಯ 79ಎ, ಬಿ ಮತ್ತು ಸಿ ಸೆಕ್ಷನ್‌ಗಳನ್ನು ಮರುಸ್ಥಾಪಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಪರಮೇಶ್ವರ್ ಲಿಖಿತ ಉತ್ತರ ನೀಡಿದ್ದಾರೆ ಎಂದು ಬಿ.ಆರ್.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More