ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ: ಜನರಿಗೆ ಧಮ್ಕಿ ಹಾಕಿದ ವಿಡಿಯೋ ವೈರಲ್

Edited By:

Updated on: Sep 07, 2026 | 12:09 PM

ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಅವರು ಜನರ ಸಮಸ್ಯೆಗೆ ಕಿವಿಗೊಡದೆ ದರ್ಪ ತೋರಿರುವ ಆರೋಪ ಕೇಳಿಬಂದಿದೆ. ಸಂತೆ ಮೈದಾನ ಒತ್ತುವರಿ ಬಗ್ಗೆ ಮಾಹಿತಿ ನೀಡಲು ಬಂದ ವ್ಯಕ್ತಿಯೊಬ್ಬರಿಗೆ ಅರ್ಜಿ ಕೊಟ್ಟು ಹೋಗುವಂತೆ ಧಮ್ಕಿ ಹಾಕಿದ್ದಾರೆ ಎನ್ನಲಾಗಿದ್ದು, ಸಿಎಂ ಡಿಕೆಶಿ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಶಾಸಕರ ಈ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತುಮಕೂರು, ಸೆಪ್ಟೆಂಬರ್​​ 07: ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಪಾವಗಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ವರ್ತಿಸಿರುವ ಆರೋಪ ಕೇಳಿಬಂದಿದೆ. ತಮ್ಮ ಸಮಸ್ಯೆ ಹೇಳಲು ಬಂದ ಜನರಿಗೆ ಅವರು ಧಮ್ಕಿ ಹಾಕಿದ್ದಾರೆ ಎನ್ನಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರ್ಜಿ ಕೊಟ್ಟು ಹೋಗಬೇಕು. ತಿರುಗಾ ಮಾತನಾಡಿದರೆ ಅಷ್ಟೇ, ಪರಿಶೀಲನೆ ಮಾಡುತ್ತೇವೆ, ಹೋಗಿ ಎಂದು ಶಾಸಕರು ಹೇಳಿರೋದು ವಿಡಿಯೋದಲ್ಲಿ ಕಂಡುಬಂದಿದೆ. ಜನಪ್ರತಿನಿಧಿಯ ಈ ನಡೆಯೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More