ತಂದೆ-ತಾಯಿ ಸಮಾಧಿ ಪಕ್ಕವೇ ಶಾಸಕ ಹೆಚ್​.ವೈ. ಮೇಟಿ ಅಂತ್ಯಕ್ರಿಯೆ

Edited By:

Updated on: Nov 05, 2025 | 5:20 PM

ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ನಡೆಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್​.ವೈ.ಮೇಟಿ ಅವರನ್ನ ಕುರುಬ ಸಮುದಾಯದ ಸಂಪ್ರದಾಯದಂತೆ ಮಣ್ಣು ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿ ರಾಜ್ಯ ಸರ್ಕಾರದ ಹಲವು ಸಚಿವರು ಈ ವೇಳೆ ಉಪಸ್ಥಿತರಿದ್ದರು. ಶಾಸಕರ ಅಂತ್ಯಕ್ರಿಯೆಗೆ ಜನ ಸಾಗರವೇ ಹರಿದುಬಂದಿತ್ತು.

ಬಾಗಲಕೋಟೆ, ನವೆಂಬರ್​ 05: ಅನಾರೋಗ್ಯದ ಹಿನ್ನಲೆ ಮರತಪಟ್ಟ ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ನಡೆಯಿತು. ಕುರುಬ ಸಮುದಾಯದ ಸಂಪ್ರದಾಯದಂತೆ ನಡೆದ ಅಂತ್ಯಸಂಸ್ಕಾರ ನಡೆದಿದ್ದು, ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್​.ವೈ.ಮೇಟಿ ಅವರನ್ನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದ್ದು, ಹೆಚ್.ವೈ.ಮೇಟಿ ಪುತ್ರರಿಗೆ ರಾಷ್ಟ್ರಧ್ವಜವನ್ನ ಸಿಎಂ ಸಿದ್ದರಾಮಯ್ಯ ಹಸ್ತಾಂತರಿಸಿದರು.ಹೆಚ್​.ವೈ.ಮೇಟಿ ಅಂತ್ಯಕ್ರಿಯೆಯಲ್ಲಿ ಸಚಿವರಾದ ಎಂ.ಬಿ‌. ಪಾಟೀಲ್, ಸತೀಶ್ ಜಾರಕಿಹೊಳಿ, ಭೈರತಿ ಸುರೇಶ್, ಹೆಚ್​.ಸಿ.ಮಹದೇವಪ್ಪ, ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 05, 2025 05:09 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More