ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?

Edited By:

Updated on: Jun 14, 2026 | 2:46 PM

ಬಿಡದಿ ಟೌನ್​ಶಿಪ್​ಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಜೆಡಿಎಸ್​ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈಗಾಗಲೇ ಬಿಡದಿ ಟೌನ್​​ ಶಿಪ್ ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಎಚ್​​​​​ಸಿ ಬಾಲಕೃಷ್ಣ, ಬಿಡದಿ ಟೌನ್​ಶಿಪ್ ಮಾಡುವ ಪ್ಲ್ಯಾನ್ ಇತ್ತು ಎನ್ನುವ ಕುಮಾರಸ್ವಾಮಿಯ ವಿಡಿಯೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಮಾಡುವ ಪ್ಲ್ಯಾನ್ ಇತ್ತು ಎಂದು ರೈತರೊಂದಿಗಿನ ಮೀಟಿಂಗ್ ನಲ್ಲಿ ಕುಮಾರಸ್ವಾಮಿ ಮಾಡಿದ್ದ ವಿಡಿಯೋ ಕಾಲ್​ ವಿಡಿಯೋ ಇದಾಗಿದ್ದು, ಶೇ.40ರಷ್ಟು ಡೆವಲಪ್ಮೆಂಟ್ ಲ್ಯಾಂಡ್ ನೀಡಲು ನಾನು ರೆಡಿ ಇದ್ದೆ ಎಂದಿದ್ದಾರೆ.

ಬೆಂಗಳೂರು, (ಜೂನ್ 14): ಬಿಡದಿ ಟೌನ್​ಶಿಪ್​ಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಜೆಡಿಎಸ್​ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈಗಾಗಲೇ ಬಿಡದಿ ಟೌನ್​​ ಶಿಪ್ ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಎಚ್​​​​​ಸಿ ಬಾಲಕೃಷ್ಣ, ಬಿಡದಿ ಟೌನ್​ಶಿಪ್ ಮಾಡುವ ಪ್ಲ್ಯಾನ್ ಇತ್ತು ಎನ್ನುವ ಕುಮಾರಸ್ವಾಮಿಯ ವಿಡಿಯೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಮಾಡುವ ಪ್ಲ್ಯಾನ್ ಇತ್ತು ಎಂದು ರೈತರೊಂದಿಗಿನ ಮೀಟಿಂಗ್ ನಲ್ಲಿ ಕುಮಾರಸ್ವಾಮಿ ಮಾಡಿದ್ದ ವಿಡಿಯೋ ಕಾಲ್​ ವಿಡಿಯೋ ಇದಾಗಿದ್ದು, ಶೇ.40ರಷ್ಟು ಡೆವಲಪ್ಮೆಂಟ್ ಲ್ಯಾಂಡ್ ನೀಡಲು ನಾನು ರೆಡಿ ಇದ್ದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More