ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

Updated on: Feb 22, 2026 | 2:58 PM

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ ಹೇಳಿ ನೋಡೋಣ. ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ. ಇವನ್ಯಾರೋ ಬಡಪಾಯಿ ಸಿಕ್ಕಿ ಹಾಕಿಕೊಂಡಿದ್ದಾನೆ ಅಷ್ಟೇ ಎಂದು ಲಂಚ ಸ್ವೀಕರಿಸಿದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.

ನವದೆಹಲಿ,(ಫೆಬ್ರವರಿ 22): ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ ಹೇಳಿ ನೋಡೋಣ. ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ. ಇವನ್ಯಾರೋ ಬಡಪಾಯಿ ಸಿಕ್ಕಿ ಹಾಕಿಕೊಂಡಿದ್ದಾನೆ ಅಷ್ಟೇ ಎಂದು ಲಂಚ ಸ್ವೀಕರಿಸಿದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More