‘ಉತ್ತರಾಧಿಕಾರಿ’ ಹೇಳಿಕೆ ವಿವಾದ: ಯತೀಂದ್ರಗೆ ಟಾಂಗ್ ಕೊಟ್ಟ ಶಾಸಕ ರಂಗನಾಥ್
ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬ ಪರಿಷತ್ ಸದಸ್ಯ ಡಾ. ಯತೀಂದ್ರ ಹೇಳಿಕೆಗೆ ಶಾಸಕ ಕುಣಿಗಲ್ ರಂಗನಾಥ್ ಟಾಂಗ್ ಕೊಟ್ಟಿದ್ದಾರೆ. ಜನ ಆಶೀರ್ವಾದ ಮಾಡಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಅದು ಬಿಟ್ಟು ಗೊಂದಲ ಸೃಷ್ಟಿ ಮಾಡಬಾರದು ಎಂದಿದ್ದಾರೆ.
ಬೆಂಗಳೂರು, ಅಕ್ಟೋಬರ್ 24: ಸಿಎಂ ಸಿದ್ದರಾಮಯ್ಯ (Siddaramaiah) ಅವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬ ಪರಿಷತ್ ಸದಸ್ಯ ಯತೀಂದ್ರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಅದರಲ್ಲೂ ಡಿಸಿಎಂ ಡಿಕೆಶಿ ಬೆಂಬಲಿಗ ಶಾಸಕರು ಗರಂ ಆಗಿದ್ದಾರೆ. ಸಿಎಂ ಪುತ್ರನ ಹೇಳಿಕೆ ವಿರುದ್ಧ ನಿನ್ನೆಯಷ್ಟೇ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕಿಡಿ ಕಾರಿದ್ದರು. ಶಾಸಕ ಕುಣಿಗಲ್ ರಂಗನಾಥ್ ಕೂಡ ಇದೇ ವಿಚಾರವಾಗಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರಗೆ ಯಾಕೆ ನೊಟೀಸ್ ಕೊಟ್ಟಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಪಕ್ಷದ ತೀರ್ಮಾನ. ಜನ ಆಶೀರ್ವಾದ ಮಾಡಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಅದು ಬಿಟ್ಟು ಗೊಂದಲ ಸೃಷ್ಟಿ ಮಾಡಬಾರದು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 24, 2025 11:31 AM
Latest Videos

