ಕೋಲಾರದ ಮಾಲೂರುನಲ್ಲಿ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡರಿಂದ ಸೀರೆ ಹಂಚಿಕೆ ಕಾರ್ಯಕ್ರಮ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 04, 2023 | 5:49 PM

ನಾವು ಈಗಾಗಲೇ ಹೇಳಿರುವಂತೆ ಬುದ್ಧಿವಂತ ಮತದಾರರು ಪಕ್ಷಗಳನ್ನು ಕೊಡುವುದನ್ನು ಇಸಿದುಕೊಂಡು ತಮ್ಮ ವಿವೇಚನೆಗೆ ತಕ್ಕಂತೆ ಮತ ಚಲಾಯಿಸಲಿದ್ದಾರೆ.

ಕೋಲಾರ:  ನೀರೆಯರಿಗೆ ಸೀರೆ ಹಂಚುವ ಕೆಲಸ ಜೋರಾಗಿ ನಡೆಯುತ್ತಿದೆ ಮಾರಾಯ್ರೇ. ಕೋಲಾರದಲ್ಲಿ ಡಿಕೆ ಶಿವಕುಮಾರ (DK Shivakumar) ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ವಿಷಯ ನಿಮಗೆ ಗೊತ್ತಿದೆ. ಜಿಲ್ಲೆಯ ಮಾಲೂರುನಲ್ಲಿ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ (KY Nanjegowda) ತಮ್ಮ ಕ್ಷೇತ್ರದ ಮಹಿಳೆಯರಿಗೆ ಸೀರೆಗಳನ್ನು ಹಂಚುವ ಕಾಯಕ ಶುರುವಿಟ್ಟುಕೊಂಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ (Model Code of Conduct) ಜಾರಿಗೆ ಬರುವ ಮೊದಲು ಹಂಚಬೇಕಿರುವುದನ್ನೆಲ್ಲ ಹಂಚಿ ಕೈತೊಳೆದುಕೊಳ್ಳುವ ಉಮೇದಿ ಎಲ್ಲ ಪಕ್ಷಗಳ ನಾಯಕರಗಿರುವಂತಿದೆ. ನಾವು ಈಗಾಗಲೇ ಹೇಳಿರುವಂತೆ ಬುದ್ಧಿವಂತ ಮತದಾರರು ಪಕ್ಷಗಳನ್ನು ಕೊಡುವುದನ್ನು ಇಸಿದುಕೊಂಡು ತಮ್ಮ ವಿವೇಚನೆಗೆ ತಕ್ಕಂತೆ ಮತ ಚಲಾಯಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.