ಕೆಎನ್ ರಾಜಣ್ಣ ಬಿಜೆಪಿ ಸೇರ್ಪಡೆ ಬಗ್ಗೆ ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಸ್ಫೋಟಕ ಹೇಳಿಕೆ
ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಕೆ.ಎನ್. ರಾಜಣ್ಣ ಅವರ ಬಿಜೆಪಿ ಸೇರ್ಪಡೆಯ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜಣ್ಣ ಅವರ ಹಿಂದಿನ ನಡವಳಿಕೆ ಮತ್ತು ಪ್ರಸ್ತುತ ಚಟುವಟಿಕೆಗಳ ಕುರಿತು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಣ್ಣ ಅವರು ಈಗಾಗಲೇ ಬಿಜೆಪಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಾಲಕೃಷ್ಣ ಹೇಳಿದ್ದಾರೆ. ಈ ಬೆಳವಣಿಗೆಯು ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮಾಜಿ ಸಚಿವ ಕೆಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟುಹೋದರು. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಮಾತಿದೆ. ಇದರಲ್ಲಿ ನಮ್ಮ ನಾಯಕರ ಷಡ್ಯಂತ್ರ ಇಲ್ಲವೇ ಇಲ್ಲ. ಪಕ್ಷದ ಮೇಲೆ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ. ಡೆಲ್ಲಿ ಸಮಾವೇಶ ಮಾಡಲಿ, ನಾವು ಹಿಡಿದುಕೊಳ್ಳಲು ಆಗುತ್ತಾ? ರಾಜಣ್ಣನವರ ಬ್ರೈನ್ ಮ್ಯಾಪಿಂಗ್ ಆಗಲಿ. ಯಾರ ಜೊತೆ ಸಂಪರ್ಕದಲ್ಲಿದ್ದಾರೆಂದು ತಿಳಿಯಲಿದೆ. ನಮ್ಮ ಸರ್ಕಾರ ಇದೆ ಎಂದು ರಾಜಣ್ಣ ಇಲ್ಲೇ ಇದ್ದಾರೆ. ಅವರು ಬೇರೆ ಬೇರೆ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಬಾಲಕೃಷ್ಣ ಹೇಳಿದ್ದಾರೆ.
Latest Videos
