AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ: ನುಡಿದಂತೆ ನಡೆದ ನಯನಾ ಮೋಟಮ್ಮ!

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ: ನುಡಿದಂತೆ ನಡೆದ ನಯನಾ ಮೋಟಮ್ಮ!

ಹರೀಶ್ ಜಿ.ಆರ್​.
| Edited By: |

Updated on:Nov 23, 2026 | 2:55 PM

Share

ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಿಸಿಕೊಂಡು ಹೋಗಬೇಕು ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿನ್ನೆ (ನವೆಂಬರ್ 22) ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ಹೇಳಿದ್ದರು. ಅದರಂತೆ ಇಂದು (ನವೆಂಬರ್ 23) ನಯನಾ ಮೋಟಮ್ಮ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ್ದಾರೆ. ಆದ್ರೆ, ಸ್ಪೀಕರ್ ಇಲ್ಲದಿದ್ದರಿಂದ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

ಬೆಂಗಳೂರು, (ನವೆಂಬರ್ 23): ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಜನರು ಬೀದಿಗಳಿದು ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ ಜನರಿಗೆ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ಸಹ ಬೆಂಬಲವಾಗಿ ನಿಂತಿದ್ದು, ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆನೆಗಳ ಸ್ಥಳಾಂತರ ಹಾಗೂ ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಸಲೇಬೆಕಂದು ಮೂಡಿಗೇರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದು, ಈ ಸಂಬಂಧ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೌದು….ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಿಸಿಕೊಂಡು ಹೋಗಬೇಕು ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿನ್ನೆ (ನವೆಂಬರ್ 22) ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ಹೇಳಿದ್ದರು. ಅದರಂತೆ ಇಂದು (ನವೆಂಬರ್ 23) ನಯನಾ ಮೋಟಮ್ಮ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ್ದಾರೆ. ಆದ್ರೆ, ಸ್ಪೀಕರ್ ಇಲ್ಲದಿದ್ದರಿಂದ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

ಆದ್ರೆ, ವಿಧಾನಸೌಧದಲ್ಲಿರುವ ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಕಚೇರಿ
ನಾನು ರಾಜೀನಾಮೆ ಪತ್ರ ಸ್ವೀಕರಿಸಲು ಅವಕಾಶವಿಲ್ಲ ಎಂದು ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಹೇಳಿದ್ದಾರೆ. ಅಲ್ಲದೇ ರಾಜೀನಾಮೆ ನೀಡಲು ಬಂದಿರುವ ವಿಚಾರವನ್ನು ಸ್ಪೀಕರ್ ಗೆ ಕರೆ ಮಾಡಿ ತಿಳಿಸಿದ್ದು, ಮುಂದೇನಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 23, 2026 02:47 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More