ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನಮಾನ

Updated on: Aug 12, 2026 | 7:39 PM

: ಡಿಕೆ ಶಿವಕುಮಾರ್ ಸರ್ಕಾರ ಬರುತ್ತಿದ್ದಂತೆಯೇ ಪಕ್ಷದಲ್ಲಿ ಒಂದಲ್ಲ ಒಂದು ಗೊಂದಲಗಳು ಉದ್ಭವಿಸುತ್ತಲೇ ಇವೆ. ಮೊನ್ನೆ ಅಷ್ಟೇ ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್ ಕಳುಹಿಸಿದ್ದ ಪಟ್ಟಿ ಬೆಂಗಳೂರಿನಲ್ಲಿ ಬದಲಾಗಿತ್ತು. ಹೌದು...ಇನ್ನೇನು ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಬೇಕೆನ್ನುವಷ್ಟರಲ್ಲೇ ಪಟ್ಟಿಯಲ್ಲಿದ್ದ ಮಾಂಕಾಳ ವೈದ್ಯ ಹೆಸರನ್ನು ಕೈಬಿಟ್ಟು ಎಸ್​​​ಎಸ್​ ಮಲ್ಲಿಕಾರ್ಜುನ ಹೆಸರು ಸೇರ್ಪಡೆ ಮಾಡಲಾಗಿತ್ತು. ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್​​ಸಿ ಗಾಯತ್ರಿ ಹೆಸರು ಸಹ ಇತ್ತು. ಅವರಿಗೂ ಸಹ ಬ್ರೇಕ್ ಹಾಕಲಾಗಿತ್ತು. ಇದೀಗ ಡೆಪ್ಯೂಟಿ ಸ್ಪೀಕರ್​​​​​​ಗೆ ಶಿಫಾರಸ್ಸು ಮಾಡಲಾಗಿದ್ದ ಹೆಸರನ್ನು ಸಹ ಬಲಾವಣೆ ಮಾಡಲಾಗಿದೆ.

ಬೆಂಗಳೂರು, (ಆಗಸ್ಟ್ 12): ಡಿಕೆ ಶಿವಕುಮಾರ್ ಸರ್ಕಾರ ಬರುತ್ತಿದ್ದಂತೆಯೇ ಪಕ್ಷದಲ್ಲಿ ಒಂದಲ್ಲ ಒಂದು ಗೊಂದಲಗಳು ಉದ್ಭವಿಸುತ್ತಲೇ ಇವೆ. ಮೊನ್ನೆ ಅಷ್ಟೇ ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್ ಕಳುಹಿಸಿದ್ದ ಪಟ್ಟಿ ಬೆಂಗಳೂರಿನಲ್ಲಿ ಬದಲಾಗಿತ್ತು. ಹೌದು…ಇನ್ನೇನು ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಬೇಕೆನ್ನುವಷ್ಟರಲ್ಲೇ ಪಟ್ಟಿಯಲ್ಲಿದ್ದ ಮಾಂಕಾಳ ವೈದ್ಯ ಹೆಸರನ್ನು ಕೈಬಿಟ್ಟು ಎಸ್​​​ಎಸ್​ ಮಲ್ಲಿಕಾರ್ಜುನ ಹೆಸರು ಸೇರ್ಪಡೆ ಮಾಡಲಾಗಿತ್ತು. ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್​​ಸಿ ಗಾಯತ್ರಿ ಹೆಸರು ಸಹ ಇತ್ತು. ಅವರಿಗೂ ಸಹ ಬ್ರೇಕ್ ಹಾಕಲಾಗಿತ್ತು. ಇದೀಗ ಡೆಪ್ಯೂಟಿ ಸ್ಪೀಕರ್​​​​​​ಗೆ ಶಿಫಾರಸ್ಸು ಮಾಡಲಾಗಿದ್ದ ಹೆಸರನ್ನು ಸಹ ಬಲಾವಣೆ ಮಾಡಲಾಗಿದೆ. ಡೆಪ್ಯೂಟಿ ಸ್ಪೀಕರ್ ಆಗಬೇಕಿದ್ದ ಪೊನ್ನಣ್ಣ ಅವರನ್ನು ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ. ಇನ್ನು ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ಮಾಂಕಾಳ ವೈದ್ಯ ಅವರನ್ನ ಆಯ್ಕೆ ಮಾಡಲಾಗಿದೆ.

ಇನ್ನುಕಾಂಗ್ರೆಸ್ ಹಿರಿಯ ಶಾಸಕ ಆರ್​​​ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲೂ ಸಚಿವ ಸ್ಥಾನ ಕೈತಪ್ಪಿದ್ದು, ಈ ಬಾರಿ ಡಿಕೆ ಶಿವಕುಮಾರ್ ಸರ್ಕಾರದಲ್ಲೂ ಸಹ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More