ಯುವ ಸಮೂಹದ ಕ್ಷಮೆ ಕೇಳಿದ್ದೇಕೆ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​?

Edited By:

Updated on: Sep 27, 2025 | 2:56 PM

ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ವಿಳಂಬ ವಿಚಾರವಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ಯುವ ಸಮೂಹದ ಕ್ಷಮೆ ಕೇಳಿದ್ದಾರೆ. ಬಿಜೆಪಿ ಕಳ್ಳರ ಬಗ್ಗೆ ಯೋಚನೆ ಮಾಡಬೇಡಿ. ನಮ್ಮ ಸರ್ಕಾರದ ಮೇಲೆ ನಂಬಿಕೆಯಿಡಿ. ನಿಮ್ಮ ಭರವಸೆಗಳನ್ಕು ಖಂಡಿತಾ ಈಡೇರಿಸುತ್ತೇವೆ. ನಾವು ಕರ್ನಾಟಕದ ಯುವಕರ ಪರವಾಗಿ ಇದ್ದೇವೆ ಎಂದಿರುವ ಪ್ರದೀಪ್​, ನೇಮಕಾತಿ ವಿಳಂಬ ಯಾಕೆ ಆಯಿತು ಗೊತ್ತಿಲ್ಲ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 27: ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ವಿಳಂಬ ವಿಚಾರವಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ಯುವ ಸಮೂಹದ ಕ್ಷಮೆ ಕೇಳಿದ್ದಾರೆ. ನಮ್ಮ ಸರ್ಕಾರದ ಮೇಲೆ ನಂಬಿಕೆಯಿಡಿ. ನಿಮ್ಮ ಭರವಸೆಗಳನ್ಕು ಖಂಡಿತಾ ಈಡೇರಿಸುತ್ತೇವೆ. ನಾವು ಕರ್ನಾಟಕದ ಯುವಕರ ಪರವಾಗಿ ಇದ್ದೇವೆ. ಬಿಜೆಪಿ ಕಳ್ಳರ ಬಗ್ಗೆ ಯೋಚನೆ ಮಾಡಬೇಡಿ. ನಾಲ್ಕು ವರ್ಷ ಇವರ ಸರ್ಕಾರವೇ ಇತ್ತು ಎಂದು ಅವರು ಆರೋಪಿಸಿದ್ದಾರೆ. ನೇಮಕಾತಿ ವಿಳಂಬ ಯಾಕೆ ಆಯಿತ್ತು ಗೊತ್ತಿಲ್ಲ. ಮೊದಲು ನಾವು ವಯೋಮಿತಿ ನಿಯಮ ಮಾಡ್ತೇವೆ ಎಂದಿರುವ ಪ್ರದೀಪ್​ ಈಶ್ವರ್,​ ರಾಜ್ಯದ ಯುವಕರಿಗೆ ಕ್ಷಮೆ ಕೇಳೋದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More