ಕತ್ತಲಲ್ಲಿ ಹುಡುಕಬೇಡ ಪ್ರತಾಪ, ನಾನು ಹಾಗಲ್ಲ: ಶಾಸಕ ಪ್ರದೀಪ್​ ಈಶ್ವರ್​ ವ್ಯಂಗ್ಯ

Updated on: Oct 24, 2025 | 3:30 PM

ಮಾಜಿ ಸಂಸದ ಪ್ರತಾಪ್​ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ನಡುವಿನ ಜಗಳ ತಾರಕಕ್ಕೆ ಏರಿದೆ. ತಮ್ಮ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಪ್ರತಾಪ್​ ಸಿಂಹಗೆ ಪ್ರದೀಪ್​ ಈಶ್ವರ್​ ತಿರುಗೇಟು ನೀಡಿದ್ದಾರೆ. ನಾನು ಕತ್ತಲಲ್ಲಿ ಕಾಣಲ್ವಂತೆ. ಅಯೋಗ್ಯ ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​ 24: ತಮ್ಮ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಮಾಜಿ ಸಂಸದ ಪ್ರತಾಪ್​ ಸಿಂಹಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ (Pradeep Eshwar) ತಿರುಗೇಟು ನೀಡಿದ್ದಾರೆ. ಎಷ್ಟು ಜನ ಗೌಡರ ಮಕ್ಕಳಿಗೆ ನೀನು ನೆರವಾಗಿದ್ದೀಯಾ? ನನ್ನ ಕ್ಷೇತ್ರದಲ್ಲಿ ನಾನು 2,500 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇನೆ. ನಾನು ಕತ್ತಲಲ್ಲಿ ಕಾಣಲ್ವಂತೆ. ಅಯೋಗ್ಯ, ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ. ಆತನಿಗೆ 50-50 ಬಿಸ್ಕತ್ ಫೆವರೇಟ್​ ಎಂದು ಪ್ರದೀಪ್​ ಈಶ್ವರ್​ ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.​