ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡ್ತೀನಿ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ರಾಜು ಕಾಗೆ
ಬೆಳಗಾವಿ ಜಿಲ್ಲೆಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಟಾಕ್ ವಾರ್ ಜೋರಾಗಿದೆ. ಹಾಲಿ ಶಾಸಕ ರಾಜು ಕಾಗೆ ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ. ನನ್ನ ತಂಟೆಗೆ ಬಂದರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ಮೆರವಣಿಗೆ ಮಾಡುತ್ತೇನೆ ಎಂದು ರಾಜು ಕಾಗೆ ನಾಲಿಗೆ ಹರಿಬಿಟ್ಟಿದ್ದಾರೆ.
ಚಿಕ್ಕೋಡಿ, ಸೆಪ್ಟೆಂಬರ್ 03: ನನ್ನ ತಂಟೆಗೆ ಬಂದರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ಮೆರವಣಿಗೆ ಮಾಡುತ್ತೇನೆ ಎಂದು ಮಾಜಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ವಿರುದ್ಧ ಹಾಲಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ (Raju Kage) ವಾಗ್ದಾಳಿ ಮಾಡಿದರು. ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯೆತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟರು.
ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟು ಹಬ್ಬ ಆಚರಿಸಿದವರು ಯಾರು? ಎಂದು ಪ್ರಶ್ನಿಸಿದರು. ಶಾಸಕ ರಾಜು ಕಾಗೆ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮಾಜಿ ಶಾಸಕ ಶ್ರೀಮಂತ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ರಾಜು ಕಾಗೆ ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:16 pm, Tue, 3 September 24