ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡ್ತೀನಿ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ರಾಜು ಕಾಗೆ

Edited By: ವಿವೇಕ ಬಿರಾದಾರ

Updated on: Sep 03, 2024 | 12:18 PM

ಬೆಳಗಾವಿ ಜಿಲ್ಲೆಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಟಾಕ್​ ವಾರ್​ ಜೋರಾಗಿದೆ. ಹಾಲಿ ಶಾಸಕ ರಾಜು ಕಾಗೆ ಮಾಜಿ ಶಾಸಕ ಶ್ರೀಮಂತ ಪಾಟೀಲ್​ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ. ನನ್ನ ತಂಟೆಗೆ ಬಂದರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ‌ ಮೆರವಣಿಗೆ ಮಾಡುತ್ತೇನೆ ಎಂದು ರಾಜು ಕಾಗೆ ನಾಲಿಗೆ ಹರಿಬಿಟ್ಟಿದ್ದಾರೆ.

ಚಿಕ್ಕೋಡಿ, ಸೆಪ್ಟೆಂಬರ್​​ 03: ನನ್ನ ತಂಟೆಗೆ ಬಂದರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ‌ ಮೆರವಣಿಗೆ ಮಾಡುತ್ತೇನೆ ಎಂದು ಮಾಜಿ‌ ಶಾಸಕ ಶ್ರೀಮಂತ ಪಾಟೀಲ್‌ (Shrimant Patil) ವಿರುದ್ಧ ಹಾಲಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ (Raju Kage) ವಾಗ್ದಾಳಿ ಮಾಡಿದರು. ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯೆತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟರು.

ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟು ಹಬ್ಬ ಆಚರಿಸಿದವರು ಯಾರು? ಎಂದು ಪ್ರಶ್ನಿಸಿದರು. ಶಾಸಕ ರಾಜು ಕಾಗೆ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಾಜಿ ಶಾಸಕ ಶ್ರೀಮಂತ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ರಾಜು ಕಾಗೆ ಮಾಜಿ ಶಾಸಕ ಶ್ರೀಮಂತ್​ ಪಾಟೀಲ್​ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

 

Published on: Sep 03, 2024 12:16 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More