ಉತ್ತರಾಧಿಕಾರಿ ನೇಮಕಕ್ಕೆ ಇದು ಮೈಸೂರು ರಾಜರ ಮನೆ ಅಲ್ಲ: ಯತೀಂದ್ರಗೆ ತಿವಿದ ಕೈ ಶಾಸಕ

Updated on: Oct 23, 2025 | 7:35 PM

ನವೆಂಬರ್ ಕ್ರಾಂತಿನೋ, ಡಿಸೆಂಬರ್ ಕ್ರಾಂತಿನೋ ಗೊತ್ತಿಲ್ಲ. ಆದ್ರೆ ರಾಜ್ಯ ಕಾಂಗ್ರೆಸ್​ನಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಶುರುವಾಗಿರುವ ನಾಯಕತ್ವ ಬದಲಾವಣೆ ವಿಚಾರ, ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ತಿ ಆಗ್ತಿರುವ ಈ ಹೊತ್ತಲ್ಲಿ ಒಂದು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿದೆ. ಸಿದ್ದರಾಮಯ್ಯನವರ ಉತ್ತರಾಧಿಕಾರಿ ಬಗ್ಗೆ ಯತೀಂದ್ರ ಆಡಿದ ಮಾತು ರಾಜ್ಯ ಕಾಂಗ್ರೆಸ್​ ನಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಈ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ.

ದಾವಣಗೆರೆ, (ಅಕ್ಟೋಬರ್ 23): ನವೆಂಬರ್ ಕ್ರಾಂತಿನೋ, ಡಿಸೆಂಬರ್ ಕ್ರಾಂತಿನೋ ಗೊತ್ತಿಲ್ಲ. ಆದ್ರೆ ರಾಜ್ಯ ಕಾಂಗ್ರೆಸ್​ನಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಶುರುವಾಗಿರುವ ನಾಯಕತ್ವ ಬದಲಾವಣೆ ವಿಚಾರ, ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ತಿ ಆಗ್ತಿರುವ ಈ ಹೊತ್ತಲ್ಲಿ ಒಂದು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿದೆ. ಸಿದ್ದರಾಮಯ್ಯನವರ ಉತ್ತರಾಧಿಕಾರಿ ಬಗ್ಗೆ ಯತೀಂದ್ರ ಆಡಿದ ಮಾತು ರಾಜ್ಯ ಕಾಂಗ್ರೆಸ್​ ನಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಈ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ.

ಇನ್ನು ಈ ಬಗ್ಗೆ ದಾವಣಗೆರೆಯಲ್ಲಿಂದು ಶಾಸಕ ಶಿವಗಂಗಾ ಬಸವರಾಜ್ ಪ್ರತಿಕ್ರಿಯಿಸಿದ್ದು, ಉತ್ತರಾಧಿಕಾರಿ ನೇಮಕ ಮಾಡಲು ಇದು ಮೈಸೂರು ರಾಜರ ಮನೆ ಅಲ್ಲ. ರಾಜರ ವಂಶದಲ್ಲಿ ಉತ್ತರಾಧಿಕಾರದ ಪದ್ಧತಿ ಇರುತ್ತೆ. ಕಾಂಗ್ರೆಸ್ ಹೈಕಮಾಂಡ್ ಪಕ್ಷ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯಗೆ ತಿವಿದಿದ್ದಾರೆ.

Published on: Oct 23, 2025 07:35 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More