ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

Updated on: Apr 13, 2026 | 10:26 PM

ಕರ್ನಾಟಕ ಸಂಪುಟ ಪುನಾರಚನೆ ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ. 

ನವದೆಹಲಿ, (ಏಪ್ರಿಲ್ 13): ಕರ್ನಾಟಕ ಸಂಪುಟ ಪುನಾರಚನೆ (cabinet reshuffle) ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರಾದ ಅಶೋಕ್ ಪಟ್ಟಣ, ಹಾಗೂ ಟಿಬಿ ಜಯಚಂದ್ರ ಸ್ಪಷ್ಟಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿರಿಯ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಸಹನೂಭೂತಿಯಿಂದ ನಮ್ಮ ಮನವಿ ಕೇಳಿದ್ದು, ಅವರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮ್ಮ ಮನವಿ ನಾವು ಮಾಡಿದ್ದೇವೆ. ಸಿಎಂ ಬದಲಾವಣೆ ಕುರಿತು ನಾವು ಯಾವುದೇ ಚರ್ಚೆ ಮಾಡಿಲ್ಲ. ನಾಲ್ಕು ಗೋಡೆಗಳ ನಡುವೆ ಈ ವಿಷಯ ಇದೆ. ಖರ್ಗೆಯವರು ನಮಗೆ ಭರವಸೆ ಕೊಟ್ಟಿದ್ದಾರೆ. ಸಂಪುಟ ಪುನರ್ ರಚನೆ ಆಗುತ್ತೆ ಅನ್ನುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ: ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ: ದಿಲ್ಲಿಗೆ ಹೋದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More