ಮುಸ್ಲಿಂ, ದಲಿತರ ಮತ ಡಿಲೀಟ್ ಮಾಡಲು RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ

Edited By:

Updated on: Oct 02, 2026 | 4:58 PM

ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ ಫಾರಂ-7 ಅರ್ಜಿಗಳ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್ ನಿರ್ದೇಶನದಂತೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಂಚು ನಡೆಯುತ್ತಿದೆ. ಆರ್‌ಎಸ್‌ಎಸ್ ಕಚೇರಿಯಲ್ಲೇ ಫಾರ್ಮ್-7 ಮುದ್ರಣವಾಗುತ್ತಿದ್ದು, ಅಲ್ಲಿಂದ ಬಿಜೆಪಿಯವರ ಕೈಗೆ ತಲುಪುತ್ತಿದೆ. ದಲಿತರು, ಮುಸ್ಲಿಮರೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು, (ಅಕ್ಟೋಬರ್ 02): ಚುನಾವಣಾ ಆಯೋಗದ ಕಚೇರಿ (SIR) ಮುಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ನಡೆಸಿದ ಧರಣಿ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಫಾರಂ-7 ದುರ್ಬಳಕೆ ಆರೋಪಿಸಿ ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ ಫಾರಂ-7 ಅರ್ಜಿಗಳ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್ ನಿರ್ದೇಶನದಂತೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಂಚು ನಡೆಯುತ್ತಿದೆ. ಆರ್‌ಎಸ್‌ಎಸ್ ಕಚೇರಿಯಲ್ಲೇ ಫಾರ್ಮ್-7 ಮುದ್ರಣವಾಗುತ್ತಿದ್ದು, ಅಲ್ಲಿಂದ ಬಿಜೆಪಿಯವರ ಕೈಗೆ ತಲುಪುತ್ತಿದೆ. ದಲಿತರು, ಮುಸ್ಲಿಮರೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 02, 2026 04:57 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More