ರಾಜಕೀಯ ನಿವೃತ್ತಿ ಬಗ್ಗೆ ಗೊಂದಲಮಯ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್!

ಅರುಣ್​ ಕುಮಾರ್​ ಬೆಳ್ಳಿ

Updated on: Feb 28, 2023 | 4:24 PM

ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದೇನೆ ಅಂತ ಸೇಟ್ ಹೇಳುತ್ತಾರೆ. ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವಂತೆ ವರಿಷ್ಠರು ಸೂಚಿಸಿದ್ದಾರೆ ಅಂತಲೂ ಹೇಳುತ್ತಾರೆ.

ಮೈಸೂರು: ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಈ ಭಾಗದ ಪ್ರಭಾವಿ ಮುಸ್ಲಿಂ ನಾಯಕರಾಗಿರುವ ತನ್ವೀರ್ ಸೇಟ್ (Tanveer Sait) ನಿಸ್ಸಂದೇಹವಾಗಿ ಗೊಂದಲದಲ್ಲಿದ್ದಾರೆ. ತನ್ನ ಹಲ್ಲೆ ನಡೆದ ನಂತರ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಹೇಳುವ ಅವರು ರಾಜಕೀಯದಿಂದ ನಿವೃತ್ತನಾಗಬಯಸಿದ್ದು, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala), ಡಿಕೆ ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿರುವುದಾಗಿ ಒಮ್ಮೆ ಹೇಳುತ್ತಾರೆ. ಮತ್ತೊಮ್ಮೆ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದೇನೆ ಅಂತ ಹೇಳುತ್ತಾರೆ. ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವಂತೆ ವರಿಷ್ಠರು ಸೂಚಿಸಿದ್ದಾರೆ ಅಂತಲೂ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.