ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಕೋರ್ಟ್ಗೆ ಹಾಜರುಪಡಿಸಿದ ಇಡಿ ಅಧಿಕಾರಿಗಳು
ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಸೇರಿ ಹಲವು ಆರೋಪಗಳನ್ನೆದುರಿಸುತ್ತಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ಅವಧಿ ಇಂದಿಗೆ ಕೊನೆಗೊಂಡಿದ್ದು, ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ಕಳೆದ ವಾರ ಅವರ ಮನೆಗಳ ಮೇಲೆ ಇಡಿ ದಾಳಿ ನಡೆದಿತ್ತು.
ಬೆಂಗಳೂರು, ಆಗಸ್ಟ್ 28: ಆನ್‌ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಮತ್ತು ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಿಂದ ಅವರನ್ನು ಕೋರ್ಟ್ಗೆ ಕರೆದೊಯ್ಯಲಾಯಿತು. ಆಗಸ್ಟ್ 22ರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವೀರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ನಡೆಸಿದ್ದರು. ನಂತರ ಸಿಕ್ಕಿಂನಿಂದ ಅವರನ್ನು ಬಂಧಿಸಲಾಗಿತ್ತು.