ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯಶವಂತರಾಯಗೌಡ ಪಾಟೀಲ್, ಸಿಎಂಗೆ ನನ್ನ ನೋವು ಹೇಳಿದ್ದೇನೆ, ಸರಿಪಡಿಸುವ ಭರವಸೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ 12 ತಾಲೂಕುಗಳು ಬರ ಎಂದು ಘೋಷಣೆ ಮಾಡಿದ್ದಾರೆ. ಆದ್ರೆ, ನನ್ನ ಎರಡು ತಾಲೂಕುಗಳು ಮಾತ್ರ ಬರ ಎಂದು ಘೋಷಣೆ ಆಗಿಲ್ಲ. ಪದೇಪದೆ ನನಗೆ ಅನ್ಯಾಯ ಆಗುತ್ತಿದೆ. ಕಟ್ಟಕಡೆಯ ತಾಲೂಕು ನಮ್ಮದು, ಆದರೂ ಬರ ಘೋಷಣೆ ಮಾಡಿಲ್ಲ. ಸಿಎಂ ಡಿ.ಕೆ.ಶಿವಕುಮಾರ್ ಗೆ ಮನವರಿಕೆ ಆಗಿದೆ, ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು, (ಸೆಪ್ಟೆಂಬರ್ 23): ತಮ್ಮ ಕ್ಷೇತ್ರವನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಯಶವಂತರಾಯಗೌಡ ಪಾಟೀಲ್ ಅವರು ಇಂದು (ಸೆಪ್ಟೆಂಬರ್ 23) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಯಶವಂತರಾಯಗೌಡ ಪಾಟೀಲ್ ಸದನದಲ್ಲಿ ಕೋಲಾಹಲ ಎಬ್ಬಿಸಿದೆ. ಇನ್ನೊಂದೆಡೆ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯಶವಂತರಾಯಗೌಡ ಪಾಟೀಲ್, ಸಿಎಂಗೆ ನನ್ನ ನೋವು ಹೇಳಿದ್ದೇನೆ, ಸರಿಪಡಿಸುವ ಭರವಸೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ 12 ತಾಲೂಕುಗಳು ಬರ ಎಂದು ಘೋಷಣೆ ಮಾಡಿದ್ದಾರೆ. ಆದ್ರೆ, ನನ್ನ ಎರಡು ತಾಲೂಕುಗಳು ಮಾತ್ರ ಬರ ಎಂದು ಘೋಷಣೆ ಆಗಿಲ್ಲ. ಪದೇಪದೆ ನನಗೆ ಅನ್ಯಾಯ ಆಗುತ್ತಿದೆ. ಕಟ್ಟಕಡೆಯ ತಾಲೂಕು ನಮ್ಮದು, ಆದರೂ ಬರ ಘೋಷಣೆ ಮಾಡಿಲ್ಲ. ಸಿಎಂ ಡಿ.ಕೆ.ಶಿವಕುಮಾರ್ ಗೆ ಮನವರಿಕೆ ಆಗಿದೆ, ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
