AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರ್ಜೇವಾಲಾ ಬಳಿ ಕಾಂಗ್ರೆಸ್ ಶಾಸಕರು ತಮ್ಮ ಕುಂದು ಕೊರತೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ: ಬಿಕೆ ಹರಿಪ್ರಸಾದ್

ಸುರ್ಜೇವಾಲಾ ಬಳಿ ಕಾಂಗ್ರೆಸ್ ಶಾಸಕರು ತಮ್ಮ ಕುಂದು ಕೊರತೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ: ಬಿಕೆ ಹರಿಪ್ರಸಾದ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 03, 2025 | 8:04 PM

Share

ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಟಿವಿ ಮಾಧ್ಯಮದಲ್ಲಿ ಚರ್ಚೆಗಳು ನಡೆಯುತ್ತಿವೆ, ತಾನೂ ಅದನ್ನು ಗಮನಿಸುತ್ತಿರುವುದಾಗಿ ಹೇಳಿದ ಹರಿ ಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎಂದರು. ತಾನು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಜುಲೈ 15ರಂದು ನಡೆಯಲಿರುವ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಭೆಯ ಹಿನ್ನೆಲೆಯಲ್ಲಿ ಎಂದು ಅವರು ಹೇಳಿದರು.

ಬೆಂಗಳೂರು, ಜುಲೈ 3: ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ ರಾಜ್ಯ ಕಾಂಗ್ರೆಸ್ ಘಟಕದಲ್ಲಿ (state Congress unit) ಯಾವ ಸರ್ಕಸ್ ಕೂಡ ನಡೆಯುತ್ತಿಲ್ಲ, ಎಐಸಿಸಿ ಕಾರ್ಯದರ್ಶಿಯಾಗಿರುವ ರಂದೀಪ್ ಸುರ್ಜೆವಾಲಾ ಅವರು ಬಹಳ ದಿನಗಳಿಂದ ಬಂದಿರಲಿಲ್ಲ, ಹಾಗಾಗೇ ಬಂದು ಶಾಸಕರ ಕುಂದು ಕೊರತೆಗಳನ್ನು ಆಲಿಸಿದರು ಎಂದು ಹೇಳಿದರು. ಅನುದಾನದ ವಿಷಯದಲ್ಲಿ ಶಾಸಕರು ಸುರ್ಜೇವಾಲಾ ಅವರೊಂದಿಗೆ ಮಾತಾಡಲಿಲ್ಲ, ಅದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಹತ್ತಿರ ಕೇಳಲಾಗದ ಕೆಲ ಶಾಸಕರು ಸುರ್ಜೇವಾಲಾ ಮುಂದೆ ಅನುದಾನ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಹರಿ ಪ್ರಸಾದ್ ಹೇಳಿದರು.

ಇದನ್ನೂ ಓದಿ:  ಅನುದಾನ ಸಿಕ್ಕಿಲ್ಲ ಅಂತೇನೂ ಇಲ್ಲ ಆದರೆ ಕಡಿಮೆ ಪ್ರಮಾಣದಲ್ಲಿ ಸಿಕ್ಕಿದೆ: ಬಿಕೆ ಹರಿಪ್ರಸಾದ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ