ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
ಬೆಂಗಳೂರು, (ಜೂನ್ 09): ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
ಇನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ನಾಳೆ (ಜೂನ್ 10) ದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಕೃತಜ್ಞತೆ ತಿಳಿಸಲಿದ್ದಾರೆ. ಬಳಿಕ ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ನೋಡಿ: ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು
Follow Us
