ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಕಾಂಗೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (94) ನಿಧನದ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕಾಗಿ ದೆಹಲಿಯಿಂದ ಬೆಳಗಾವಿಗೆ ಹೊರಟಿದ್ದ ಸುಮಾರು 20ಕ್ಕೂ ಹೆಚ್ಚು ಶಾಸಕರು ಮತ್ತು ಮೂವರು ಸಚಿವರು ಹವಾಮಾನ ವೈಪರೀತ್ಯದಿಂದಾಗಿ ಇಂಡಿಗೋ ವಿಮಾನದಲ್ಲಿ ಸಿಲುಕಿದ್ದಾರೆ. ಬೆಳಗ್ಗೆ 6.45ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನ ತಡವಾಗಿದೆ. ಶರಣಪ್ರಕಾಶ ಪಾಟೀಲ್, ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವು ನಾಯಕರು ವಿಮಾನದಲ್ಲಿಯೇ ಲಾಕ್ ಆಗಿದ್ದಾರೆ.
ಬೆಂಗಳೂರು, ಡಿಸೆಂಬರ್ 15: ಕಾಂಗೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (94) ನಿಧನದ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕಾಗಿ ದೆಹಲಿಯಿಂದ ಬೆಳಗಾವಿಗೆ ಹೊರಟಿದ್ದ ಸುಮಾರು 20ಕ್ಕೂ ಹೆಚ್ಚು ಶಾಸಕರು ಮತ್ತು ಮೂವರು ಸಚಿವರು ಹವಾಮಾನ ವೈಪರೀತ್ಯದಿಂದಾಗಿ ಇಂಡಿಗೋ ವಿಮಾನದಲ್ಲಿ ಸಿಲುಕಿದ್ದಾರೆ. ಬೆಳಗ್ಗೆ 6.45ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನ ತಡವಾಗಿದೆ. ಶರಣಪ್ರಕಾಶ ಪಾಟೀಲ್, ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವು ನಾಯಕರು ವಿಮಾನದಲ್ಲಿಯೇ ಲಾಕ್ ಆಗಿದ್ದರು. ಇದೀಗ ಡಾ.ಪರಮೇಶ್ವರ್ ಮತ್ತು ಪ್ರಿಯಾಂಕ್ ಖರ್ಗೆ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಂಗಳೂರಿನ ಹೆಚ್ಎಎಲ್ಗೆ ಪ್ರಯಾಣಿಸಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

