ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಮದುವೆಯಾದ್ರೆ 2 ಮಕ್ಕಳಾಗುತ್ತೆ: ಕಾಂಗ್ರೆಸ್ ಎಂಎಲ್ಸಿ ಸಿ.ಎಂ ಇಬ್ರಾಹಿಂ
ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯ, ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಕನ್ನಡಿಗ ಯಡಿಯೂರಪ್ಪಗೆ 75 ವರ್ಷ ಆಗಿದೆ ಎಂದು ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ: ಸಿ.ಎಂ ಇಬ್ರಾಹಿಂ
ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪದತ್ಯಾಗದ ಕುರಿತು ಮಾತನಾಡಿರುವ ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ, ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯ, ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಕನ್ನಡಿಗ ಯಡಿಯೂರಪ್ಪಗೆ 75 ವರ್ಷ ಆಗಿದೆ ಎಂದು ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಆರೂವರೆ ಕೋಟಿ ಜನರಿರುವ ರಾಜ್ಯದಲ್ಲಿ ಬದಲಾವಣೆ ಸಹಿಸಲ್ಲ. ಏಕಾಏಕಿ ರಾಜಕೀಯ ಒತ್ತಡ ಹಾಕಿ ರಾಜೀನಾಮೆ ಪಡೆಯೋದು ಸರಿಯಲ್ಲ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ನಾಲ್ಕು ತಿಂಗಳ ಹಿಂದೆ ಜೂನ್, ಜುಲೈ ಆಗಸ್ಟ್ನಲ್ಲಿ ರಾಜ್ಯ ರಾಜಕಾರಣದ ಇತಿಹಾಸ ಬದಲಾಗುತ್ತದೆ ಎಂದು ಹೇಳಿದ್ದೆ. ಕೇಶವಕೃಪಾಕ್ಕೂ, ಬಸವಕೃಪಾಕ್ಕೂ ಹೊಂದಾಣಿಕೆ ಬರೋದಿಲ್ಲ ಎನ್ನೋದು ಗೊತ್ತು. ಆದರೆ, ಯಡಿಯೂರಪ್ಪಗೆ 75 ವರ್ಷ ವಯಸ್ಸಾಗಿದೆ ಎಂದು ಕಾರಣ ಕೊಟ್ಟಿದ್ದು ಸರಿಯಲ್ಲ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ ಎಂದು ಇಬ್ರಾಹಿಂ ಅಭಿಪ್ರಾಯಪಟ್ಟಿದ್ದಾರೆ.
ಅಕ್ಟೋಬರ್ನಲ್ಲಿ ಅಲ್ಪಸಂಖ್ಯಾತರ ಸಭೆ ನಡೆಯಲಿದೆ. ಹೀರಾ-ಪೀರಾ ಸಭೆ ಕರೆದು ರಾಜ್ಯದ ಹಿತಾಸಕ್ತಿ ಕಾಪಾಡಲು ಏನು ಕ್ರಮ ಕೈಗೊಳ್ಳಬೇಕು ಅನ್ನೋದನ್ನು ನಿರ್ಧರಿಸುತ್ತೇವೆ. ಈ ತಿಂಗಳಲ್ಲಿ ಅಲ್ಪಸಂಖ್ಯಾತರ ಸಭೆ ಕರೆದಿದ್ದೇನೆ. ಯಡಿಯೂರಪ್ಪ ಲವಲವಿಕೆಯಿಂದ ಇದ್ದಾರೆ. ರಾಜ್ಯಪಾಲರ ಹುದ್ದೆ ತಿರಸ್ಕರಿಸಿದ್ದಾರೆ. ಕನ್ನಡಿಗರು ನೀಡುವವರು, ಬೇಡುವವರಲ್ಲ. ಯಡಿಯೂರಪ್ಪ ಮೇಲೆ ಆರೋಪ, ಪ್ರತ್ಯಾರೋಪ ಇರಬಹುದು, ಅದು ಬೇರೆ. ಅಧಿಕಾರ ಇದ್ದಾಗ ನಾನು ದೂರ ಇರುವ ಮನುಷ್ಯ ಎಂದು ಇಬ್ರಾಹಿಂ ತಿಳಿಸಿದ್ದಾರೆ.
ಇದನ್ನೂ ಓದಿ:
ಯಡಿಯೂರಪ್ಪಗೆ ವಯಸ್ಸು 75 ವರ್ಷ: ಅವರಿಗೆ ಈಗ ಮದುವೆ ಮಾಡಿದ್ರೂ ಎರಡು ಮಕ್ಕಳಾಗುತ್ತದೆ- ಕಾಂಗ್ರೆಸ್ ಎಂಎಲ್ಸಿ ಸಿ.ಎಂ. ಇಬ್ರಾಹಿಂ
ಮುಂದಿನ ಸಂಪುಟದಲ್ಲಿ ಯಡಿಯೂರಪ್ಪ ಪಾತ್ರ ಇರಲ್ಲ. ಇನ್ನು ಮಕ್ಕಳ ಪಾತ್ರ ಎಲ್ಲಿಂದ ಬಂತು?: ಸಂಸದ ಬಿ ವೈ ರಾಘವೇಂದ್ರ