ಪ್ರಜ್ವಲ್ ಆಗಮನದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಡಿಕೆ ಸುರೇಶ್ ಪ್ರತ್ಯಕ್ಷ! ಹೇಳಿದ್ದೇನು?
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಾಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸಹ ಅಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಪ್ರಜ್ವಲ್ರನ್ನು ಎಸ್ಐಟಿ ವಶಕ್ಕೆ ಪಡೆದ ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಸುರೇಶ್ ಹಲವು ವಿಚಾರ ಪ್ರಸ್ತಾಪಿಸಿದರು. ಆ ಕುರಿತು ವಿಡಿಯೋ ಇಲ್ಲಿದೆ.
ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ವಶವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ (Bengaluru Airport) ನಿಲ್ದಾಣಕ್ಕೆ ಬಂದ ಅದೇ ಸಮಯದಲ್ಲಿ ರಾತ್ರಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸಹ ಅಲ್ಲಿ ಕಂಡುಬಂದು ಅಚ್ಚರಿ ಮೂಡಿಸಿದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೂ ಅವರು ಉತ್ತರಿಸಿದರು.
ಅಶ್ಲೀಲ ವಿಡಿಯೋ ಕೇಸ್ನಲ್ಲಿ ಎಸ್ಐಟಿಯಿಂದ ಪ್ರಜ್ವಲ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಾಕಷ್ಟು ಆರೋಪಗಳು ಅವರ ಮೇಲಿದೆ. ಅದನ್ನು ಎದುರಿಸುವುದಕ್ಕಾಗಿ ಎಸ್ಐಟಿ ಮುಂದೆ ಹಾಜರಾಗುತ್ತಾರೆ. ಇದರಲ್ಲಿ ಷಡ್ಯಂತ್ರದ ವಿಚಾರ ಇಲ್ಲ. ಇದು ಸ್ವಯಂಕೃತ ಅಪರಾಧ ಅಷ್ಟೆ. ಪೆನ್ಡ್ರೈವ್ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಏನು ತನಿಖೆ ಅಗಬೇಕಿದೆಯೋ ಅದರಂತೆ ಆಗಲಿದೆ ಎಂದರು.
ಇದನ್ನೂ ಓದಿ: ಮ್ಯೂನಿಕ್ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ
ಪ್ರಕರಣ ಬೆಳಕಿಗೆ ಬಂದಾಗ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಅವರು 33 ದಿನಗಳು ಕಳೆದ ಮೇಲೆ ವಾಪಸ್ ಬಂದಿದ್ದಾರೆ. ಸಾಕ್ಷ್ಯ ನಾಶದ ಸಾಧ್ಯತೆ ಏನಾದರೂ ಇದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುರೇಶ್, ಆ ಬಗ್ಗೆ ನನಗೆ ಗೊತ್ತಿಲ್ಲ. ಎಸ್ಐಟಿ ತನಿಖೆ ನಡೆಯಲಿ. ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ