Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘನೆ

ಅಮೆರಿಕದಲ್ಲಿ ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘನೆ

ಸುಷ್ಮಾ ಚಕ್ರೆ
|

Updated on: Feb 14, 2025 | 4:58 PM

ಫ್ರಾನ್ಸ್​ನಿಂದ ಅಮೆರಿಕಕ್ಕೆ ಭೇಟಿ ನೀಡಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಇದೀಗ ಭಾರತಕ್ಕೆ ಮರಳುತ್ತಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಪಿಎಂ ನರೇಂದ್ರ ಮೋದಿ ತಂತ್ರಜ್ಞಾನ, ಅಕ್ರಮ ವಲಸೆ, ವ್ಯಾಪಾರ, ರಕ್ಷಣಾ ಕ್ಷೇತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ತಮ್ಮ ನಿಲುವು ತಿಳಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವಾಗ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಮೋದಿ ಪ್ರಸ್ತಾಪಿಸಬೇಕಿತ್ತು ಎನ್ನುವ ವಿಷಯವನ್ನು ಹೊರತುಪಡಿಸಿ ಉಳಿದೆಲ್ಲ ಮಾತುಕತೆಯೂ ಬಹಳ ಪ್ರೋತ್ಸಾಹದಾಯಕವಾಗಿತ್ತು ಎಂದು ಶಶಿ ತರೂರ್ ಹೇಳಿದ್ದಾರೆ.

ಬೆಂಗಳೂರು: ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ, ರಕ್ಷಣಾ ವಲಯ, ಕೈಗಾರಿಕೆ, ಅಕ್ರಮ ವಲಸೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಭಾರತೀಯರ ಅಕ್ರಮ ವಲಸೆಯ ಕುರಿತು ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಧಾನಿ ಮೋದಿಯವರ ನಿಲುವನ್ನು ಬೆಂಬಲಿಸಿದ್ದಾರೆ. ಆದರೆ ಅಮೆರಿಕದಿಂದ ಗಡೀಪಾರು ಮಾಡಲಾದ ದಾಖಲೆರಹಿತ ಭಾರತೀಯ ವಲಸಿಗರನ್ನು ನಡೆಸಿಕೊಂಡ ರೀತಿಯ ಬಗ್ಗೆ ಮೋದಿ ವಿರೋಧ ವ್ಯಕ್ತಪಡಿಸಬೇಕಿತ್ತು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದರು ಮತ್ತು ವಲಸೆ ಮತ್ತು ವ್ಯಾಪಾರ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು. ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ ಮತ್ತು ಅಮೆರಿಕ ಮತ್ತು ಭಾರತದ ನಡುವಿನ ಕೆಲವು ಕಳವಳಗಳನ್ನು ಮೋದಿ ಭೇಟಿಯ ವೇಳೆ ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವಿನ ಭೇಟಿಯ ಫಲಿತಾಂಶವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿದ್ದಾರೆ. ಇಬ್ಬರೂ ನಾಯಕರ ಪತ್ರಿಕಾ ಹೇಳಿಕೆಗಳು “ಪ್ರೋತ್ಸಾಹದಾಯಕವಾಗಿವೆ” ಮತ್ತು “ಕಳವಳಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ